Thursday, June 13, 2024

ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ: ಮಲ್ಲಿಕಾರ್ಜುನ ಖರ್ಗೆ

Most read

ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಅಯೋಧ್ಯೆ ರಾಮಮಂದಿರಕ್ಕೆ ಬುಲ್ಲೋಜರ್ ಹತ್ತಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ ಹೇಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇಂಡಿಯಾ ಮೈತ್ರಿಕೂಟದ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.

ಇಂಡಿಯಾ ಮೈತ್ರಿಕೂಟ ಗೆದ್ದರೆ ಇಂಡಿಯಾ ಮೈತ್ರಿಕೂಟ ಗೆದ್ದರೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳಿಸುತ್ತೇವೆ. ನಾವು ಧಾರ್ಮಿಕ ಸ್ವಾತಂತ್ರ್ಯದ ರಕ್ಷಣೆಗೆ ಬದ್ಧರಾಗಿದ್ದೇವೆ. ಬುಲ್ಡೋಜ‌ರ್ ಹತ್ತಿಸುವುದು ಬಿಜೆಪಿ ಸಂಸ್ಕೃತಿಯೇ ಹೊರತು ಕಾಂಗ್ರೆಸ್‌ನದ್ದಲ್ಲ. ನಾವು ಮಂದಿರ ಕಟ್ಟುವವರು. ದೇಶ ಸಂವಿಧಾನದ ಆಶಯದಂತೆ ನಡೆಯಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಎಂದಿಗೂ ಮಾಡದ ಕೆಲಸಗಳ ಬಗ್ಗೆ, ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ. ನಾವು ಯಾರ ಮೇಲೆಯೂ ಬುಲ್ಡೋಜ‌ರ್ ಬಳಸಿಲ್ಲ. ಮೋದಿಯವರ ಮಾತು ವಿಭಜನೆ ಮತ್ತು ಪ್ರಚೋದಿಸುವ ಉದ್ದೇಶದಿಂದ ಕೂಡಿದೆ ಎಂದು ಟೀಕಿಸಿದ್ದಾರೆ.

ನಾವು ಅಧಿಕಾರಕ್ಕೆ ಬಂದರೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳಿಸುತ್ತೇವೆ ಎಂದು ಖರ್ಗೆ ಘೋಷಿಸಿದ್ದಾರೆ.

More articles

Latest article