Saturday, July 27, 2024

ಬೆಂಗಳೂರು | ಅನುಮಾನಾಸ್ಪದ ವ್ಯಕ್ತಿಯಿಂದ ಮಹಿಳಾ ಅಧಿಕಾರಿಗಳ ಬಗ್ಗೆ ಮಾಹಿತಿ ಸಂಗ್ರಹ : ಓರ್ವ ವ್ಯಕ್ತಿ ಬಂಧನ

Most read

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಅಧಿಕಾರಿಗಳ ಬಗ್ಗೆ ಮಾಹಿತಿ ಕಲೆಹಾಕಿದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಮುಖ್ಯಮಂತ್ರಿಗಳ ಕಾರ್ಯದರ್ಶಿಯವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಆರೋಪಿ ವಿಕ್ರಂ ಗೋಪಾಲಸ್ವಾಮಿ ಎಂಬುವರು ವಿಧಾನಸೌಧ ಹಾಗೂ ಇತರೆ ಸರ್ಕಾರಿ ಇಲಾಖೆಗಳಲ್ಲಿ ಮಹಿಳಾ ಅಧಿಕಾರಿಗಳ ಮಾಹಿತಿ ಕಲೆಹಾಕುತ್ತಿದ್ದರು.

ಆರೋಪಿಯು ತಾನು ಕಂದಾಯ ಸಚಿವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಡಿಜಿಪಿ ಕಚೇರಿಯಿಂದ ಮತ್ತು ಬೆಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಿಂದ ಸರ್ಕಾರಿ ಕಚೇರಿಗಳಿಗೆ ಅನೇಕ ಬಾರಿ ಕರೆ ಮಾಡಿದ್ದಾರೆ.

ಗೋಪಾಲಸ್ವಾಮಿ ವಿರುದ್ಧ ಮಹಿಳಾ ಅಧಿಕಾರಿಯೊಬ್ಬರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಕ್ಷಣ ಪೊಲೀಸರು ಗೋಪಾಲಸ್ವಾಮಿಯನ್ನು ಬಂಧಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪಿ ನಿವೃತ್ತ ಅಧಿಕಾರಿಯೊಬ್ಬರ ಪುತ್ರ ಎಂಬುದು ಪತ್ತೆಯಾಗಿದೆ.

ಮಹಿಳಾ ಅಧಿಕಾರಿಗಳ ಬಗ್ಗೆ ಮಾಹಿತಿ ಯಾಕೆ ಕಲೆಯಾಕುತ್ತಿದ್ದ, ಅದರ ಉದ್ದೇಶವೆನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

More articles

Latest article