ಕೌಟುಂಬಿಕ ಕಲಹ: ಪತಿ ಆತ್ಮಹತ್ಯೆ

Most read

ಬೆಂಗಳೂರು: ಪತ್ನಿಯೊಂದಿಗೆ ನಡೆದ ಜಗಳದಿಂದ ನೊಂದು ಲಾರಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇ ಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ದೂರು ದಾಖಲಾಗಿದೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜೆ.ಸಿ.ನಗರದ ನಿವಾಸಿ, ಲಾರಿ ಮಾಲೀಕ ಎಂ.ಜಿ.ಸೋಮಶೇಖರ್(47) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತರ ತಂದೆ ನೀಡಿರುವ ದೂರು ಆಧರಿಸಿ ಅಸಹಜ ಸಾವಿನ (ಯುಡಿಆರ್) ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ತಡರಾತ್ರಿ ತಮ್ಮ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಪ್ರಯತ್ನ ನಡೆಸುತ್ತಿದ್ದರು. ಇದನ್ನು ಗಮನಿಸಿದ ಮನೆಯವರು ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೌಟುಂಬಿಕ ಕಲಹಕ್ಕೆ ಮಗ ಮತ್ತು ಸೊಸೆ ಜಗಳ ಮಾಡಿಕೊಂಡಿದ್ದರು ಇದರಿಂದ ನೊಂದು ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನ ಸಾವಿನ ಬಗ್ಗೆ ಯಾರ ಮೇಲೂ ಅನುಮಾನ ಇಲ್ಲ ಎಂದು ಮೃತರ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

More articles

Latest article