ಪಾರ್ನ್ ವಿಡಿಯೋ ನೋಡಿ ತನ್ನ ತಂಗಿಯನ್ನು ಅತ್ಯಾಚಾರ ಮಾಡಿ ಕೊಲೆಗೈದಿರುವ ಘಟನೆ ಉತ್ತರಪ್ರದೇಶದ ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯಲ್ಲಿ 19 ವರ್ಷದ ಯುವಕ ತನ್ನ 17 ವರ್ಷದ ಸಹೋದರಿಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಘಟನೆ ಫೆಬ್ರವರಿ 3ರ ರಾತ್ರಿ ನಡೆದಿದೆ. ಆರೋಪಿಯನ್ನು ಸಂಜು ಎಂದು ಗುರುತಿಸಿದ್ದು ತನ್ನ ಮೊಬೈಲ್ ಫೋನ್‌ನಲ್ಲಿ ಅಶ್ಲೀಲ ವೀಡಿಯೊವನ್ನು ವೀಕ್ಷಿಸಿದ ನಂತರ ಈ ಕೃತವನ್ನು ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಈ ಘಟನೆ ಸಂಭವಿಸಿದಾಗ ಒಡಹುಟ್ಟಿದರಾದ ಅಣ್ಣ ಸಂಜು ಹಾಗೂ ತಂಗಿ ಮಾತ್ರ ಮನೆಯಲ್ಲಿ ಇದ್ದರು. ಅವರ ತಾಯಿ ಸಂಬಂಧಿಕರನ್ನು ಭೇಟಿ ಮಾಡಲು ಹೋಗಿದ್ದರು ಎಂದು ವರದಿಯಾಗಿದೆ.
ಪೋಲೀಸರ ಪ್ರಕಾರ, ಸಂಜು ಪೋರ್ನ್ ವಿಡಿಯೋ ವೀಕ್ಷಿಸಿದ ನಂತರ ತನ್ನ ಪಕ್ಕದಲ್ಲಿ ಮಲಗಿದ್ದ ತಂಗಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ತಾನು ಮಾಡಿದ್ದನ್ನು ಬಹಿರಂಗಪಡಿಸಬಹುದೆಂಬ ಭಯದಿಂದ ಸಂಜು ತನ್ನ ತಂಗಿಯ ಕತ್ತು ಹಿಸುಕಿ ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ.
ಮರುದಿನ ಫೆಬ್ರವರಿ 4 ರಂದು ಸಂಜು ವಿರುದ್ಧ ಸಂತ್ರಸ್ತೆಯ ಚಿಕ್ಕಪ್ಪ ರಾಧೇಶ್ಯಾಮ್ ದೂರು ದಾಖಲಿಸಿದ್ದಾರೆ. ಫೆಬ್ರವರಿ 5 ರಂದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಸಂಜು ತನ್ನ ಅಪರಾಧಗಳನ್ನು ಒಪ್ಪಿಕೊಂಡಿದ್ದಾನೆ.
ಆರೋಪಿ ಸಂಜುವಿನ ಅಶ್ಲೀಲ ವಿಡಿಯೋಗಳಿರುವ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಕಾಸ್‌ಗಂಜ್‌ನ ಪೊಲೀಸ್ ವರಿಷ್ಠಾಧಿಕಾರಿ ಖಚಿತಪಡಿಸಿದ್ದಾರೆ.