ಬೆಂಗಳೂರಿನ ಗಿರಿನಗರದ ಬಳಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ವ್ಯಕ್ತಿ ಸಾವು

ಬೆಂಗಳೂರು: ಗಿರಿನಗರದ ಕುಳ್ಳಣ್ಣ ಗುಡ್ಡದ ನಿರ್ಜನ ಪ್ರದೇಶದಲ್ಲಿ ಕೈಕಾಲು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದ್ದ ಚಿಂದಿ ಆಯುವ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಸಾಜಿ ಮೊಹಮ್ಮದ್ (38) ಮೃತ ದುರ್ದೈವಿ. ಬುಧವಾರ ಬೆಳಗ್ಗೆ ಸುಮಾರು 6.30ರ ವೇಳೆಗೆ ದುಷ್ಕರ್ಮಿಗಳು ಆತನ ಕೈಕಾಲುಗಳನ್ನು ಕಟ್ಟಿ, ಮುಖಕ್ಕೆ ಬಟ್ಟೆ ಸುತ್ತಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಬೆಂಕಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಗುಡ್ಡದಿಂದ ಕೆಳಕ್ಕೆ ಬಿದ್ದಿದ್ದ ಮೊಹಮ್ಮದ್‌ಗೆ ಎದೆ ಭಾಗದಲ್ಲಿಯೂ ಗಾಯಗಳಾಗಿದ್ದವು.

ಘಟನೆಯಲ್ಲಿ ದೇಹದ ಶೇ.60ರಿಂದ 70ರಷ್ಟು ಭಾಗ ಸುಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಸಾಜಿ ಮೊಹಮ್ಮದ್ ಪಾದರಾಯನಪುರದ ನಿವಾಸಿಯಾಗಿದ್ದು, ಕಳೆದ ಹತ್ತು ವರ್ಷಗಳಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿಂದಿ ಆಯುವ ಮೂಲಕ ಜೀವನ ಸಾಗಿಸುತ್ತಿದ್ದ ಎನ್ನಲಾಗಿದೆ. ಆದರೆ, ಆತನ ಕುಟುಂಬದ ಬಗ್ಗೆ ಈವರೆಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಘಟನೆ ಕುರಿತು ಬುಧವಾರ ಮಾಹಿತಿ ನೀಡಿದ್ದ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಕೆ. ವಂಶಿಕೃಷ್ಣ, ಗಾಯಾಳುವಿನ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಬೆಂಕಿ ತಗುಲಿದ ಸ್ಥಿತಿಯಲ್ಲಿ ಗುಡ್ಡದಿಂದ ಕೆಳಕ್ಕೆ ಓಡಿಬಂದಾಗ ಎದೆ ಭಾಗಕ್ಕೂ ಸುಟ್ಟ ಗಾಯಗಳಾಗಿದ್ದವು ಎಂದು ತಿಳಿಸಿದ್ದರು.

More articles

Latest article

Most read