ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು( Mandya Loksabha constituency) ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಇನ್ನು ಜೆಡಿಎಸ್ನಿಂದು ಮಂಡ್ಯದಲ್ಲಿ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವ ಹಲವು ದಿನಗಳ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ. ನಿಖಿಲ್ ಕಣಕ್ಕಿಳಿಯುವ ಬಗ್ಗೆ ಪರೋಕ್ಷವಾಗಿ ಎಚ್ಡಿ ಕುಮಾರಸ್ವಾಮಿ(HD Kumaraswamy) ಖಚಿತಪಡಿಸಿದ್ದಾರೆ.
ಅಭ್ಯರ್ಥಿ ಆಯ್ಕೆ ಸಂಬಂಧ ಇಂದು (ಮಾರ್ಚ್ 15) ಮಂಡ್ಯದಲ್ಲಿ ಕುಮಾರಸ್ವಾಮಿ, ಜೆಡಿಎಸ್ ನಾಯರು, ಮುಖಂಡರ ಜೊತೆ ಸಭೆ ಮಾಡಿದ್ದು, ನಿಮಗೆ ನಿಖಿಲ್ನನ್ನು ಒಪ್ಪಿಸಲು ಮುಂದಾಗುತ್ತೇನೆ. ನಿಮ್ಮ ಆಸೆಗೆ ನಾವು ಭಂಗ ತರಲ್ಲ. ಪುತ್ರ ನಿಖಿಲ್ ಕುಮಾರಸ್ವಾಮಿಗೂ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೆರವೇರಿಸಿಕೊಳ್ಳುತ್ತೇನೆ. ಮಾರ್ಚ್ 21ಕ್ಕೆ ನನಗೆ ಆಪರೇಷನ್ ಇದೆ. ಆದ್ದರಿಂದ ಮಾರ್ಚ್ 25ರಂದು ಮಂಡ್ಯಕ್ಕೆ ಬಂದು ಅಭ್ಯರ್ಥಿ ಘೋಷಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಪರೋಕ್ಷವಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನೇ ಮಂಡ್ಯದಿಂದ ಕಣಕ್ಕಿಳಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು. ಇದರೊಂದಿಗೆ ಮಂಡ್ಯ ಜೆಡಿಎಸ್ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆಗಳಿಗೆ ಇದೀಗ ಉತ್ತರ ಸಿಕ್ಕಂತಾಗಿದೆ. ಜಿಲ್ಲೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಆಗಬಾರದು. ಮಂಡ್ಯ ಜಿಲ್ಲೆಯ ಜನತೆ ನಮಗೆ ಅನ್ಯಾಯ ಮಾಡಿಲ್ಲ. ಈಗಲೂ ಸಹ ನಮಗೆ ಸಹಕಾರ ಕೊಟ್ಟಿದ್ದಾರೆ. ರಾಜಕಾರಣದಲ್ಲಿ ಎಲ್ಲೋ ಒಂದು ಕಡೆ ಅಸಮಾಧಾನ ಬಂದಿರಬಹುದು. ಬೆಳೆಸಿರುವಂತಹ ನಿಮ್ಮ ಮುಂದೆ ಜಿಲ್ಲೆಯ ಜನರಿಗೆ ಸ್ಪಷ್ಟವಾದ ಮನವಿ ಮಾಡಲು ಬಯಸುತ್ತೇನೆ. ನಮ್ಮಿಂದ ತಪ್ಪಾಗಿದ್ದರೆ ನಾಗಮಂಗಲದ ಜನ ಸೋಲಿಸಿದ್ದಾರೆ ಎಂದು ಹೇಳಲಾಗದು. ನಮ್ಮಲ್ಲೇ ಕೆಲವು ದೋಷಗಳಾಗಿವೆ. ನಮ್ಮ ತಪ್ಪುಗಳಿಂದ ಚುನಾವಣೆಯಲ್ಲಿ ಹಿನ್ನೆಡೆಯಾಗಿದೆ. ತಪ್ಪು ಮಾಡುವುದು ಸಹಜ. ಅದನ್ನು ತಿದ್ದಿಕೊಳ್ಳುವುದು, ಸರಿಪಡಿಸಿಕೊಳ್ಳುವುದು, ನಮ್ಮ ಕೈಯಲ್ಲಿದೆ. ಕೈ ಜೋಡಿಸಿ ಕೇಳುತ್ತೇನೆ” ಎಂದು ಕಾರ್ಯಕರ್ತರಲ್ಲಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ