Saturday, December 7, 2024

ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ ಆಯ್ಕೆ

Most read

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನು ಇಂದು ಬೆಳಗ್ಗೆ ಮೊದಲು ಬ್ರೇಕ್ ಮಾಡಿದ್ದು ನಿಮ್ಮ ಹೆಮ್ಮೆಯ ಕನ್ನಡ ಪ್ಲಾನೆಟ್.

ಮಂಡ್ಯದಲ್ಲಿ ಇಂದು ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ಜನಪದ ತಜ್ಞರು, ವಿದ್ವಾಂಸರು ಮತ್ತು ಸಾಹಿತಿಗಳಾದ ಗೊ.ರು. ಚ. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ವಿಶೇಷ ಎಂದರೆ ಅವರು ಈ ಹಿಂದೆ 1992 ರಿಂದ 1995 ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕೊಪ್ಪಳ (1993), ಮಂಡ್ಯ (1994), ಮತ್ತು ಮುಧೋಳದಲ್ಲಿ (1995)ರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ.

ಈ ಹಿಂದೆ ಅವರೇ ಅಧ್ಯಕ್ಷರಾಗಿ 1994 ರಲ್ಲಿ ಮಂಡ್ಯದಲ್ಲಿ ಯಶಸ್ವಿಯಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ಇದೀಗ ಅವರೇ ಮಂಡ್ಯದಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ವಿಶೇಷ.

ಅನೇಕ ಸಾಹಿತ್ಯ ಕೃತಿಗಳನ್ನು ರಚಿಸಿರುವ ಇವರ ಕೆಲವು ಕೃತಿಗಳು ಹೀಗಿವೆ:
ಮಹಾದೇವಿ, ಸದಾಶಿವ ಶಿವಾಚಾರ್ಯ, ಕರ್ನಾಟಕ ಪ್ರಗತಿಪಥ, ಚೆಲುವಾಂಬಿಕೆ, ಕುನಾಲ, ಸಾಕ್ಷಿ ಕಲ್ಲು, ಬೆಳ್ಳಕ್ಕಿ ಹಿಂಡು ಬೆದರ್ಯಾವೊ, ಬಾಗೂರು ನಾಗಮ್ಮ, ಗ್ರಾಮ ಗೀತೆಗಳು, ವಿಭೂತಿ, ಕರ್ನಾಟಕ ಜನಪದ ಕಲೆಗಳು, ಬಾಗೂರು ನಾಗಮ್ಮ, ಗ್ರಾಮಗೀತೆಗಳು, ಕರ್ನಾಟಕ ಜನಪದ ಕಲೆಗಳು, ಹೊನ್ನ ಬಿತ್ತೇವು ನೆಲಕೆಲ್ಲ ಅವರ ಮೌಲ್ಯಯುತ ಕೃತಿಗಳು. ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾನಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವಲ್ಲಿ ಇವರ ಪಾತ್ರ ಹಿರಿದು.

ಗೊ. ರು. ಚ. ಅವರು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಮಹತ್ವದ ಸಾಧನೆಗಳನ್ನು ಮಾಡಿದ್ದಾರೆ.


ಕಸಾಪ ತನ್ನ ಕಾಲ ಮೇಲೆ ತಾನು ನಿಲ್ಲುವಂತೆ ಮಾಡುವಲ್ಲಿ ಇವರ ಶ್ರಮ ಅಪಾರವಾದುದು. ಇದರ ಮೊದಲ ಭಾಗವಾಗಿ ಅಮೃತನಿಧಿ ಯೋಜನೆ ಯೋಜನೆ ರೂಪಿಸಿದರು. ಡಾ.ಹಾಮಾನಾ ಅವರು ಬೀದರ್ ಸಮ್ಮೇಳನದಲ್ಲಿ 1985 ರಲ್ಲಿ ಸಮ್ಮೇಳನಾಧ್ಯಕ್ಷ ಸ್ಥಾನದಿಂದ ಪರಿಷತ್ತಿನ ಆರ್ಥಿಕ ಸ್ವಾವಲಂಬನೆಗಾಗಿ, “ಒಬ್ಬ ಕನ್ನಡಿಗ – ಒಂದು ರೂಪಾಯಿ” ಘೋಷಣೆ ಮೊಳಗಿಸಿದ್ದರು. ಈ ನಿಟ್ಟಿನಲ್ಲಿ ಗೊರುಚ ಆವರು ಅಮೃತನಿಧಿ ಚೀಟಿಗಳನ್ನು ಮುದ್ರಿಸಿ ಮಾರಾಟ 25 ಲಕ್ಷ ರೂ.ಗಳಷ್ಟು ಅಮೃತನಿಧಿಯನ್ನು ಸಂಗ್ರಹಿಸಿದ್ದರು.

ಗೊರುಚ ಅವರದ್ದು ಮೆಲುದನಿ. ಕೇಳಲು ಇಂಪು ಎನ್ನುವುದು ಕೇಳಿದವರಿಗೆ ಮಾತ್ರ ಗೊತ್ತು. ಅದರಲ್ಲೂ ಇವರ ಇನಿ ಧ್ವನಿಯಲ್ಲಿ ಜನಪದ ಸಾಹಿತ್ಯವನ್ನು ಕೇಳುವುದೇ ಚೆನ್ನ. ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾನಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವಲ್ಲಿ ಇವರ ಪಾತ್ರ ಹಿರಿದು.

ಗೊ.ರು. ಚನ್ನಬಸಪ್ಪ ಅವರು 18 ಮೇ 1930 ರಲ್ಲಿ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಗೊಂಡೇದಹಳ್ಳಿಯಲ್ಲಿ ರುದ್ರಪ್ಪಗೌಡ ಅಕ್ಕಮ್ಮ ಇವರ ಪುತ್ರರಾಗಿ ಜನಿಸಿದರು. ಇವರಿಗೆ ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ, ಕರ್ನಾಟಕದ ರಾಜ್ಯೋತ್ಸವ ಪ್ರಶಸ್ತಿ ಮುಂತಾದವು ಸಂದಿವೆ. ಹಲವು ಕ್ಷೇತ್ರಗಳಲ್ಲಿ ಪರಿಣಿತಿ ಸಾಧಿಸಿದ್ದರೂ ಜನಪದ ಇವರ ಮೆಚ್ಚಿನ ಕ್ಷೇತ್ರ. ಗ್ರಾಮೀಣ ಪ್ರದೇಶದಿಂದ ಹುಟ್ಟಿ ಬೆಳೆದಿದ್ದು ಕಾರಣವಿರಬಹುದು.

1967ರಲ್ಲಿ ತರೀಕೆರೆಯಲ್ಲಿ ನಡೆದ ಜಾನಪದ ಸಮ್ಮೇಳನದ ಸಂದರ್ಭದಲ್ಲಿ ಹೊರತಂದ ಕೃತಿ ಹೊನ್ನ ಬಿತ್ತೇವು ಹೊಲಕೆಲ್ಲ ಅಭಿನಂದನಾ ಗ್ರಂಥವನ್ನು ಹೊರತರಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು, ವಜ್ರಮಹೋತ್ಸವ, ಕರ್ನಾಟಕ ಜಾನಪದ ಕಲೆ, ಕನ್ನಡ ಪತ್ರಿಕೋದ್ಯಮ, ಸುತ್ತೂರ ಸಿರಿ, ಮೊದಲಾದ 40ಕ್ಕೂ ಹೆಚ್ಚು ಸಾಕ್ಷ್ಯ ಚಿತ್ರಗಳನ್ನು ನಿರ್ಮಿಸಿದ್ದಾರೆ. ಇವರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ.

More articles

Latest article