Friday, December 6, 2024

ಕೆರಗೋಡು ಪ್ರಕರಣ| ಸಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದರೆ ಕಾನೂನು ಕ್ರಮ : ಜಿಲ್ಲಾಡಳಿತ ಆದೇಶ

Most read

ಮಂಡ್ಯ ಜಿಲ್ಲೆಯ ಕೆರಗೋಡು ಹನುಮ ಧ್ವಜ ವಿವಾದ ಈಗ ಕರ್ನಾಟಕದ ಹಾಟ್ ಟಾಪಿಕ್ ಆಗಿದ್ದು, ದಿನನಿತ್ಯ ಹಲವು ರಾಜಕೀಯ ನಾಯಕರು ಪ್ರಚೋದನಕಾರಿ ಹೇಳಿಕೆ ಕೊಡುತ್ತಲೇ ಇದ್ದಾರೆ. ಈ ಕುರಿತು ಸೂಕ್ಷ್ಮವಾಗಿ ಗಮನಿಸಿರುವ ಮಂಡ್ಯ ಜಿಲ್ಲಾಡಳಿತ, ಪ್ರಚೋದನೆ ನೀಡುವಂತವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ಹೊರಡಿಸಿದೆ.

ಈ ಕುರಿತು ಇಂದು ಆದೇಶ ಹೊರಡಿಸಿರುವ ಮಂಡ್ಯ ಜಿಲ್ಲಾಧಿಕಾರಿ ಹಾಗು ಪೊಲೀಸ್ ಅಧೀಕ್ಷಕರು, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾರೇ ಆಗಲಿ ಸಾಮಾಜಿಕ ಜಾಲತಾಣಗಳಾದ X (Twitter), Facebook, Whatsaap, Instagram, Youtube) a) ដ ಸ್ವಾಸ್ಥ್ಯಕ್ಕೆ ಭಂಗತರುವ ಚಿತ್ರಗಳು, ವಿಡಿಯೋಗಳು, ಪ್ರಚೋದನಾಕಾರಿ ಹೇಳಿಕೆಗಳು, ಪೋಸ್ಟರ್‌ಗಳು ಹಾಗೂ ಉದ್ರೇಕಕಾರಿ ಭಾಷಣಗಳನ್ನು ಮಾಡಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಳುಹಿಸುವವರ ಹಾಗೂ ಇದಕ್ಕೆ ಪ್ರಚೋದನೆ ನೀಡುವಂತವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವದು ಎಂದು ಖಡಕ್ ಎಚ್ಚರಿಕೆ ರವಾನಿಸಿದೆ.

ಸಾಮಾಜಿಕ ಜಾಲತಾಣಗಳ ಮೇಲೆ ಜಿಲ್ಲಾಡಳಿತವು ತೀವ್ರತರವಾದ ನಿಗಾ ಇಟ್ಟಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

More articles

Latest article