ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ  ಅಧಿಕೃತ ಚಾಲನೆ

Most read

ಸಮ್ಮೇಳನದ ವೇದಿಕೆ ಆವರಣದಲ್ಲಿ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ  ಸಚಿವರು ಹಾಗೂ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಎನ್ ಚಲುವರಾಯಸ್ವಾಮಿ ಅವರು ರಾಷ್ಟ್ರ ಧ್ವಜಾರೋಹಣ  ನೆರವೇರಿಸಿದರೆ,

ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಪರಿಷತ್ತಿನ ಧ್ವಜ ಹಾಗೂ  ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕರಾದ ಮೀರಾ ಶಿವಲಿಂಗಯ್ಯ ನಾಡ ಧ್ವಜಾರೋಹಣ ಮಾಡಿದರು

ನಂತರ ಸಮ್ಮೇಳನದ ಸರ್ವಾಧ್ಯಕ್ಷ ಗೊ.ರು. ಚನ್ನಬಸಪ್ಪ ಅವರ ಮೆರವಣಿಗೆಗೆ  ನಡೆಯಿತು. ಮೆರಣಿಗೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ  ಚಾಲನೆ ನೀಡಿದರು.

ಆದಿ ಚುಂಚನಗಿರಿ ಮಠದ ನಿರ್ಮಲಾನಂದ ನಾಥ ಸ್ವಾಮೀಜಿ, ಪುರುಷೋತ್ತಮಾನಂದ  ಸ್ವಾಮೀಜಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಚೆಸ್ಕಾಂ ಅಧ್ಯಕ್ಷ ರಮೇಶ್ ಬಂಡಿ ಸಿದ್ದೇಗೌಡ , ಶಾಕರಾದ ದಿನೇಶ್ ಗೂಳಿಗೌಡ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು‌.

More articles

Latest article