ಮಂಡ್ಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು, ಬಂಧನ!

ಮಂಡ್ಯ ಜಿಲ್ಲೆಯ ಶಾಲೆಯೊಂದರಲ್ಲಿ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಶಾಲೆಯ ಹಳೆಯ ವಿದ್ಯಾರ್ಥಿ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಯೋಗಿ ಎಂಬ ಹಳೇ ವಿದ್ಯಾರ್ಥಿ ತನ್ನ ಶಾಲೆಯ ಮಕ್ಕಳಿಗೆ ಚಿತ್ರಕಲೆ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ಮಕ್ಕಳನ್ನು ಬಳಸಿಕೊಂಡು ಹೀನ ಕೃತ್ಯ ಎಸಗಿದ್ದಾನೆ. ಅಣ್ಣನಂತೆ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯರ ನಗ್ನ ಫೋಟೋ ತೆಗೆದು, ಲೈಂಗಿಕ ಕಿರುಕುಳ ನೀಡಿದ್ದಾನೆ. ಮೇಲುಕೋಟೆ ಠಾಣಾ ವ್ಯಾಪ್ತಿಯ ಸರ್ಕಾರಿ ಪ್ರೌಢ ಶಾಲೆಯೊಂದರಲ್ಲಿ ಈ ಘಟನೆ ವರದಿಯಾಗಿದೆ.

ಕ್ರೀಡೆಯಲ್ಲಿ ಆಸಕ್ತಿ ಇದ್ದ ಬಾಲಕಿಯರನ್ನೇ ಆರೋಪಿ ಯೋಗಿ ಟಾರ್ಗೆಟ್ ಮಾಡುತ್ತಿದ್ದ. ಈಗ ನೊಂದ ನಾಲ್ವರು ಬಾಲಕಿಯರು ಘಟನೆ ಸಂಬಂಧ ದೂರು ನೀಡಿದ್ದು ದೂರಿನನ್ವಯ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಪೊಲೀಸರು ಪೋಕ್ಸೋ ಜೊತೆಗೆ ಐಪಿಸಿ ಸೆಕ್ಸನ್ 354 A, 354 D, 509 ರಿತ್ಯ ಕೇಸ್ ದಾಖಲಿಸಿ ಆರೋಪಿಯನ್ನು ಜೈಲಿಗೆ ಕಳುಹಿಸಲಾಗಿದೆ.

More articles

Latest article

Most read