ಮಂಗಳೂರಿನಲ್ಲಿ ರೂ. 14 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ; ಆರೋಪಿಗಳ ಬಂಧನ

Most read

ಮಂಗಳೂರು: ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ. ರೋಡ್‌ ಶಾಖೆಯಲ್ಲಿ ನಡೆದಿದ್ದ ರೂ. 14 ಕೋಟಿ ಮೌಲ್ಯದ ಚಿನ್ನಾಭರಣ, ನಗದು ದರೋಡೆ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಮುರುಗಂಡಿ ದೇವರ್, ಪ್ರಕಾಶ್ ಅಲಿಯಾಸ್ ಜೋಶ್ವಾ ,ಮನಿವೆನನ್ ಬಂಧಿತ ಆರೋಪಿಗಳು.

ಮೂವರು ಆರೋಪಿಗಳನ್ನು ಬಂಧಿಸಿರುವುದನ್ನು ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗ್ರವಾಲ್‌ ಖಚಿತಪಡಿಸಿದ್ದಾರೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್‌ ಶಾಖೆಗೆ ಶುಕ್ರವಾರ ನುಗ್ಗಿದ್ದ ದರೋಡೆಕೋರರು ರೂ. 14 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ್ದರು.

ಮುಂಬೈ ಮೂಲದ ಗ್ಯಾಂಗ್ ನಿಂದ ಈ ದರೋಡೆ ನಡೆದಿದೆ. ತಮಿಳುನಾಡು ಮೂಲದ ಮುರುಗಂಡಿ ದೇವರ್, ಪ್ರಕಾಶ್ ಅಲಿಯಾಸ್ ಜೋಶ್ವಾ ,ಮನಿವೆನನ್ ಬಂಧಿತರು. ಕಳ್ಳತನಕ್ಕೆ ಬಳಸಿದ್ದ ಫಿಯೆಟ್ ಕಾರು, ಹಣ, ಚಿನ್ನ ತುಂಬಿಕೊಂಡು ಹೋಗಿದ್ದ ಎರಡು ಗೋಣಿ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ. ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಮೂವರು ಆರೋಪಿಗಳ ಬಂಧನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article