ಕೋಮು ಗಲಭೆ ನಡೆಸುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿಣ  ಕ್ರಮ:ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು,  ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ವಿಧಾನ ಪರಿಷತ್  ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಳಗ್ಗೆ ಹರಿಪ್ರಸಾದ್ ಅವರ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಅವರ ಜತೆ ಉಪಹಾರ ಸ್ವೀಕರಿಸಿ ಮಂಗಳೂರು ಘಟನೆ ಕುರಿತು ಚರ್ಚೆ ನಡೆಸಿದರು.   ನಂತರ ಮಾತನಾಡಿದ ಅವರು ಕೋಮು ಗಲಭೆಗಳನ್ನು ಉಂಟುಮಾಡುವವರು  ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನಿನ ರೀತಿ ಕಠಿಣ  ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಸ್ಪಷ್ಟಪಡಿಸಿದರು.

ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ  ನಡೆಯಲಿರುವ ಡಿ.ಸಿ. ಹಾಗೂ ಸಿಇಒ ಗಳ ಸಭೆಯಲ್ಲಿ ಮುಂಗಾರು ಮಳೆ ಪರಿಸ್ಥಿತಿ ಹಾಗೂ  ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿಗಳು ತಿಳಿಸಿದರು.

More articles

Latest article

Most read