ಮಂಗಳೂರು ಜೈಲಿಗೆ ಪೊಲೀಸ್‌ ದಾಳಿ: ಕಾರ್ಯಚರಣೆ ವೇಳೆ ಮೊಬೈಲ್‌, ಡ್ರಗ್ಸ್ ಮತ್ತು ಇನ್ನಿತರೆ ವಸ್ತುಗಳು ಪತ್ತೆ!

ಮಂಗಳೂರು ಪೊಲೀಸರು ಏಕಾಏಕಿ ಮಂಗಳೂರು ಜೈಲಿನ ಮೇಲೆ ದಾಳಿ ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಗಾಂಜಾ , ಡ್ರಗ್ಸ್ ಮತ್ತು ಮೊಬೈಲ್​ ಫೋನ್​ಗಳು, ಡಿವೈಸ್​ಗಳು ಪತ್ತೆಯಾಗಿವೆ.

ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಸಿಕ್ಕಿದ್ದು ಪೊಲೀಸರು ಆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಜೈಲು ಖೈದಿಗಳ ಜೊತೆಗಿದ್ದ ಗಾಂಜಾ ಮತ್ತು ಡ್ರಗ್ಸ್ ಪ್ಯಾಕೇಟ್​ಗಳನ್ನು ಕೂಡಾ ವಶಕ್ಕೆ ಪಡೆಯಲಾಗಿದೆ.

ಮುಂಜಾನೆ ನಾಲ್ಕು ಗಂಟೆಯ ವೇಳೆಗೆ ಜೈಲಿನ ಮೇಲೆ ಏಕಕಾಲದಲ್ಲಿ ನೂರೈವತ್ತಕ್ಕೂ ಅಧಿಕ ಪೊಲೀಸರು ದಾಳಿ ಮಾಡಿದರು. ಡ್ರಗ್ಸ್, ಗಾಂಜಾ ಪತ್ತೆಯ ಹಿನ್ನಲೆಯಲ್ಲಿ ತನಿಖೆಗೆ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಆದೇಶ ಹೊರಡಿಸಿದ್ದಾರೆ.

More articles

Latest article

Most read