ಮಂಕಾಳು ವೈದ್ಯಗೆ ಕೊಕ್‌, ಎಸ್‌.ಎಸ್‌. ಮಲ್ಲಿಕಾರ್ಜುನಗೆ ಸ್ಥಾನ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯಲ್ಲಿ ಕೊನೆ ಕ್ಷಣದಲ್ಲಿ ಬದಲಾವಣೆ ಆಗಿದೆ. ಮಂಕಾಳು ವೈದ್ಯ ರ ಬದಲಿಗೆ ಎಸ್‌.ಎಸ್.ಮಲ್ಲಿಕಾರ್ಜುನ ಅವರಿಗೆ ಸಂಪುಟಕ್ಕೆ ಸೇರ್ಪಡೆ ಮಾಡಲಾಗಿದೆ.

ಭಟ್ಕಳ ಶಾಸಕ ಮಂಕಾಳು ವೈದ್ಯ ಅವರ ಹೆಸರು ಮೊದಲ ಪಟ್ಟಿಯಲ್ಲಿತ್ತು. ಇದೀಗ ಕೆಲ ನಿಮಿಷಗಳ ಹಿಂದೆಯಷ್ಟೇ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಕರೆ ಬಂದಿದ್ದು, ನಿಮ್ಮನ್ನು ಸಂಪುಟ ಸೇರ್ಪಡೆಯಿಂದ ಕೈಬಿಡಲಾಗುತ್ತಿದೆ ಎಂದು ಹೇಳಲಾಗಿದೆ ಎಂದು ತಿಳಿದುಬಂದಿದೆ.

ಹೈಕಮಾಂಡ್ ಬಿಡುಗಡೆ ಮಾಡಿದ ಸಚಿವರ ಪಟ್ಟಿಯಲ್ಲಿ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹೆಸರು ಇರಲಿಲ್ಲ. ಆ ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಭಟ್ಕಳ- ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಕೈಬಿಟ್ಟು, ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮಂತ್ರಿ ಪಟ್ಟ ನೀಡಲಾಗಿದೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ದಿ. ಶಾಮನೂರು ಶಿವಶಂಕರಪ್ಪ ಅವರ ಪುತ್ರರಾಗಿರುವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಜಿಲ್ಲೆಯಲ್ಲಿ ಅತ್ಯಂತ ಪ್ರಭಾವಿ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ.

‘ಮೊದಲ ಪಟ್ಟಿ ಬಿಡುಗಡೆ ಬಳಿಕ ಎಸ್.ಎಸ್.ಮಲ್ಲಿಕಾರ್ಜುನ್ ಅವರು ರಾಜ್ಯಮಟ್ಟದ ನಾಯಕರು ಹಾಗೂ ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರಿ ತಮ್ಮ ಹೆಸರನ್ನು ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ’ ಎಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿಬರುತ್ತಿವೆ. ಆದರೆ, ‘ಟೈಪ್ ಮಾಡುವಾಗ ಸಣ್ಣದೋಷ ಉಂಟಾಗಿದ್ದರಿಂದ ಮೊದಲ ಪಟ್ಟಿಯಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹೆಸರು ಇರಲಿಲ್ಲ. ಬಳಿಕ ಪಟ್ಟಿಯನ್ನು ಸರಿಪಡಿಸಿ ಬಿಡುಗಡೆ ಮಾಡಲಾಗಿದೆ’ ಎಂದು ಎಸ್.ಎಸ್.ಮಲ್ಲಿಕಾರ್ಜುನ್ ಅವರ ಆಪ್ತ ಮೂಲಗಳು ತಿಳಿಸಿವೆ.

More articles

Latest article

Most read