ಪ್ಯಾರಿಸ್ ಒಲಿಂಪಿಕ್ಸ್‌ | ಶೂಟಿಂಗ್​ನಲ್ಲಿ ಎರಡೆರಡು ಪದಕ ಗೆದ್ದು ಇತಿಹಾಸ ನಿರ್ಮಿಸಿದ ಮನು ಭಾಕರ್

Most read

ಪ್ಯಾರಿಸ್​ ಒಲಿಂಪಿಕ್ಸ್‌ 2024ನಲ್ಲಿ ಭಾರತ ಮತ್ತೊಂದು ಪದಕವನ್ನು ತನ್ನದಾಗಿಸಿಕೊಂಡಿದ್ದು, ಇದರೊಂದಿಗೆ ಭಾರತ ಹೊಸ ಇತಿಹಾಸ ನಿರ್ಮಿಸಿದೆ. ಸ್ವತಂತ್ರ ಭಾರತ ನಂತರ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಭಾರತ ಶೂಟರ್ ಮನು ಭಾಕರ್​ ಪಾತ್ರರಾಗಿದ್ದಾರೆ.

10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಮತ್ತು ಮನು ಭಾಕರ್​ ಜೋಡಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. 2 ದಿನಗಳ ಹಿಂದಷ್ಟೇ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಭಾಕರ್ ಕಂಚಿನ ಪದಕ ಗೆದ್ದು ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದರು. ಈ ಮೂಲಕ ಭಾರತಕ್ಕೆ 2ನೇ ಪದಕ ಗೆದ್ದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಮಂಗಳವಾರ ನಡೆದ ಕಂಚಿನ ಪದಕ ಸ್ಪರ್ಧೆಯಲ್ಲಿ ಭಾರತೀಯ ಜೋಡಿ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊ ಲೀ ವಿರುದ್ಧ 16-10 ಅಂಕಗಳಿಂದ ಗೆದ್ದು ಕಂಚಿನ ಪದಕ ತನ್ನದಾಗಿಸಿಕೊಂಡಿತು.

More articles

Latest article