ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ಅವ್ಯವಹಾರ, ಕಾನೂನು ಬಾಹಿರ ಚಟುವಟಿಕೆ ಆರೋಪ ಹಿನ್ನೆಲೆ ಮುಡಾ ಅಧ್ಯಕ್ಷ ಕೆ.ಮರೀಗೌಡ ರಾಜೀನಾಮೆ ನೀಡಿದ್ದಾರೆ.
ಮುಡಾದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿಗೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಸಿಎಂ, ಅವರ ಪತ್ನಿ, ಬಾಮೈದ ಮತ್ತು ಜಮೀನುದಾರರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದೂರು ದಾಖಲಿಸಿಕೊಂಡು ತನಿಖೆ ಆರಂಬಿಸಿದ್ದರು. ಇದರ ಬೆನ್ನಲ್ಲೇ ಈಗ ಮುಡಾ ಅಧ್ಯಕ್ಷ ಮರೀಗೌಡ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ನೀಡಿ ಮೊದಲ ಪ್ರತಿಕ್ರಿಯೆ ನೀಡಿದ ಕೆ.ಮರಿಗೌಡ
ಆರೋಗ್ಯ ಸರಿಯಿಲ್ಲದ ಕಾರಣ ಸಿಎಂ ಸೂಚನೆ ಮೇರೆಗೆ ರಾಜೀನಾಮೆ ನೀಡಿದ್ದೇನೆ. ಮುಡಾ ಅಕ್ರಮದ ಬಗ್ಗೆ ತನಿಖೆ ನಡೆಯುತ್ತಿದೆ. ಅಕ್ರಮ ಆಗಿರುವ ಬಗ್ಗೆ ತನಿಖೆಯಲ್ಲಿ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.
ಸಿಎಂ ಮತ್ತು ಯಾವುದೇ ನಾಯಕರು ನನಗೆ ಒತ್ತಡ ಹಾಕಿಲ್ಲ. ಆರೋಗ್ಯ ಸರಿಯಿಲ್ಲದ ಕಾರಣ ರಾಜೀನಾಮೆ ನೀಡಿದ್ದೇನೆ. ಸಿದ್ದರಾಮಯ್ಯ ಜೊತೆ 40 ವರ್ಷಗಳಿಂದ ಇದ್ದೇನೆ. ನಾನೇ ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.