ಕಾಂಗ್ರೆಸ್ ಪಕ್ಷ ಸೇರಿದ ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ ಅವರ ಮಾತುಗಳು

Most read

ಜಾತ್ಯಾತೀತ ತತ್ವಗಳನ್ನು ಜೆಡಿಎಸ್ ಗಾಳಿಗೆ ತೂರಿದ ಕಾರಣ ನನ್ನ ಕ್ಷೇತ್ರದ ಶಿಕ್ಷಕರ ಅಭಿಪ್ರಾಯ ಕೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ತೀರ್ಮಾನ ಮಾಡಿದೆ.

ಜೆಡಿಎಸ್ ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕಾರ್ಯಕರ್ತರ, ಮುಖಂಡರ ಅಭಿಪ್ರಾಯಗಳಿಗೆ ಬೆಲೆ ಇಲ್ಲ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಕಾವೇರಿ ವಿಚಾರವನ್ನು ಭಾವನಾತ್ಮಕವಾಗಿ ಬಳಸಿಕೊಂಡಿದ್ದಾರೆ. ರೈತರ ಹೆಸರೇಳಿಕೊಂಡು ಜನತಾದಳ ಕೇವಲ ರಾಜಕಾರಣ ಮಾಡಿದೆ. ಮಂಡ್ಯ ಜಿಲ್ಲೆಗೆ ಜೆಡಿಎಸ್ ಕೊಡುಗೆ ಶೂನ್ಯ. ಚೆಲುವರಾಯ ಸ್ವಾಮಿ ಅವರು ಆರೋಗ್ಯ ಸಚಿವರಾಗಿದ್ದಾಗ ಮೆಡಿಕಲ್ ಕಾಲೇಜು ತಂದರು.

ಜನತಾದಳದವರು ನನಗೆ ಟಿಕೆಟ್ ಮಾತ್ರ ನೀಡಿದರು ಆದರೆ ಬೆಂಬಲ ಮಾತ್ರ ನೀಡಲಿಲ್ಲ. ಕೇವಲ ಕುಟುಂಬದ ಪರವಾಗಿ ಮಾತ್ರ ಪಕ್ಷದ ಸಭೆಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಿದ್ದರು. ನಾನು ಅನೇಕ ಬಾರಿ ಇದರ ವಿರುದ್ಧ ದನಿ ಎತ್ತಿದ್ದೇನೆ. ರೈತ ವಿರೋಧಿ ಕಾಯ್ದೆಗಳನ್ನು ಜೆಡಿಎಸ್ ಬೆಂಬಲ ವ್ಯಕ್ತಪಡಿಸಿದಾಗ ನಾನು ವಿರೋಧ ವ್ಯಕ್ತಪಡಿಸಿದ್ದೆ.

ಕಳೆದ 4 ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದೆ. ಮೊದಲನೇ ಬಾರಿಗೆ ಡಿ.ಕೆ. ಶಿವಕುಮಾರ್ ಅವರ ಆಶೀರ್ವಾದದಿಂದ ಟಿಕೆಟ್ ದೊರೆಯಿತು. 1985 ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜನತಾದಳಕ್ಕೆ ಸೇರಿದ್ದೆ. ಇಂದು ಜಾತ್ಯತೀತ ತತ್ವಗಳಿಗೆ ಧಕ್ಕೆ ಆಗಿರುವ ಕಾರಣ ಮತ್ತು ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿಗೆ ಸಂಪೂರ್ಣವಾಗಿ ಬೆಂಬಲ ನೀಡಲಿದ್ದೇವೆ.

More articles

Latest article