Sunday, September 8, 2024

ನೇಪಾಳದಲ್ಲಿ ಭಾರೀ ಭೂಕುಸಿತ: ಬಸ್‌ನಲ್ಲಿದ್ದ 7 ಮಂದಿ ಭಾರತೀಯರು ಸೇರಿ 65 ಪ್ರಯಾಣಿಕರು ನಾಪತ್ತೆ

Most read

ನೇಪಾಳದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಪರಿಣಾಮ ಹೆದ್ದಾರಿಯಲ್ಲಿ ಸಾಗುತ್ತಿದ್ದ ಎರಡು ಬಸ್ ಗಳು ಜಖಂಗೊಂಡು 7 ಭಾರತೀಯರು ಸೇರಿ ಒಟ್ಟು 65 ಮಂದಿ ಪ್ರಯಾಣಿಕರು ನಾಪತ್ತೆಯಾಗಿರುವ ಘಟನೆ ಶುಕ್ರವಾರ ವರದಿಯಾಗಿದೆ.

ಚಿತ್ವಾನ್ ಜಿಲ್ಲೆಯ ನಾರಾಯಣಘಾಟ್-ಮುಗ್ಲಿಂಗ್ ರಸ್ತೆಯ ಸಿಮಲ್ಟಾಲ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಈ ವೇಳೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಎರಡು ಬಸ್ ಗಳು ತ್ರಿಶೂಲಿ ನದಿಯಲ್ಲಿ ಬಿದ್ದು ಚಾಲಕರ ಸಮೇತ ಪ್ರಯಾಣಿಕರು ನಾಪತ್ತೆಯಾಗಿದ್ದಾರೆ.

ಬೆಳಗಿನ ಜಾವ 3:30 ರ ಸುಮಾರಿಗೆ ಭೂಕುಸಿತ ಸಂಭವಿಸಿದ್ದು, ಬಸ್‌ಗಳು ಜಖಂಗೊಡಿವೆ. ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

More articles

Latest article