ಸರ್ಕಾರಕ್ಕೆ ಮೂರು ವರ್ಷ: ಮೇ 20ರ ಬದಲು , ಮೇ 19ರಂದು ತುಮಕೂರಿನಲ್ಲಿ ಕಾರ್ಯಕ್ರಮ ಆಯೋಜನೆ

ತುಮಕೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮೇ 20ಕ್ಕೆ ಮೂರು ವರ್ಷಗಳನ್ನು ಪೂರೈಸಲಿದ್ದು, ಆ ದಿನ ತುಮಕೂರಿನಲ್ಲಿ ನಡೆಯುವ ಕಾರ್ಯಕ್ರಮವನ್ನು ಮೇ 20ರ ಬದಲಿಗೆ 19ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದರು.

ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮೇ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ 2ನೇ ಅವಧಿಯ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಆಗಲಿದೆ. ಅಂದು ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಬೇಡಿಕೆ ಈಡೇರಿಸುವಂತೆ ಅಂದೇ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ತೊಂದರೆಯಾಗದಂತೆ ಅದಕ್ಕೆ ಮುನ್ನಾ ದಿನ ಮೇ 19ರಂದೇ ಕಾರ್ಯಕ್ರಮ ಆಯೋಜಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಿನಾಂಕ ಮಾತ್ರ ಬದಲಾಗಿದೆ. ಉಳಿದಂತೆ ಎಲ್ಲ ಕಾರ್ಯಕ್ರಮಗಳು ಪೂರ್ವ ಯೋಜಿತದಂತೆ ನಡೆಯಲಿವೆ ಎಂದು ಅವರು ವಿವರಿಸಿದರು.

ಪ್ರಮುಖವಾಗಿ ಕಂದಾಯ ಇಲಾಖೆಯಲ್ಲಿ ಬಹುಕಾಲದಿಂದ ಜಮೀನು ವಾರಸುದಾರರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಕಳೆದ ಒಂದೂವರೆ ವರ್ಷದಲ್ಲಿ ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿದ್ದು, ಮೇ 19ರ ಕಾರ್ಯಕ್ರಮದಲ್ಲಿ ಇ-ಪೌತಿ ಖಾತೆ, ದರಖಾಸ್ತು ಪೋಡಿ, ಕಂದಾಯ ಗ್ರಾಮ ಹಕ್ಕುಪತ್ರಗಳು, ಪಿಂಚಣಿ ಸೇರಿದಂತೆ ಸುಮಾರು 1,52,492 ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಸುಮಾರು 14 ಲಕ್ಷ ಜನರಿಗೆ ಈ ಸೌಲಭ್ಯಗಳು ದೊರೆತಿವೆ ಎಂದು ಅವರು ತಿಳಿಸಿದರು.

ಅಲ್ಲದೆ, ತುಮಕೂರು ಜಿಲ್ಲೆಯಲ್ಲಿ ಆಗಿರುವ ಇತರೆ ಇಲಾಖೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಸುಮಾರು 682 ಕೋಟಿ ರೂ.ಗಳ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ ಎಂದರು.

ಈ ಕಾರ್ಯಕ್ರಮ ಸಂಪೂರ್ಣ ಸರ್ಕಾರಿ ಕಾರ್ಯಕ್ರಮವಾಗಿದ್ದು, ಪಕ್ಷಾತೀತ ಕಾರ್ಯಕ್ರಮ ಎಂದು ಈ ಹಿಂದೆಯೇ ತಿಳಿಸಲಾಗಿತ್ತು. ಅಂತೆಯೇ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಎಲ್ಲಾ ಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಸಂಸದರು, ಮುಖಂಡರು ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಆಗಮಿಸಲಿದ್ದು, ಅವರಿಗೆ ಬಸ್ಸುಗಳ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.

ಮೇ 19ರಂದು ನಡೆಯುವ ಕಾರ್ಯಕ್ರಮದಲ್ಲಿ ಇ-ಪೌತಿ ಖಾತೆ, ದರಖಾಸ್ತು ಪೋಡಿ, ಕಂದಾಯ ಗ್ರಾಮ ಹಕ್ಕುಪತ್ರಗಳು, ಪಿಂಚಣಿ ಸೇರಿದಂತೆ ಸುಮಾರು 1,52,492 ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಸೌಲಭ್ಯ ವಿತರಣೆ ಮಾಡಲಾಗುವುದು. ತುಮಕೂರು ಜಿಲ್ಲೆಯಲ್ಲಿ ಸುಮಾರು 682 ಕೋಟಿ ರೂ.ಗಳ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಶಿಲಾನ್ಯಾಸ ಹಾಗೂ ಉದ್ಘಾಟನೆ ಮಾಡಲಿದ್ದಾರೆ ಎಂದು ಪರಮೇಶ್ವರ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ ಅವರು ಇದ್ದರು.

More articles

Latest article

Most read