ಮೇ 25, ಸಿವಿಲ್‌ ಸರ್ವೀಸ್‌ ಪ್ರಿಲಿಮಿನರಿ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ಜೆರಾಕ್ಸ್ ಸೈಬರ್ ಸೆಂಟರ್ ಮುಚ್ಚಲು ಆದೇಶ

Most read

ಬೆಂಗಳೂರು: 25-05 2025 ರಂದು ಕೇಂದ್ರ ಲೋಕಸೇವಾ ಆಯೋಗ ನಡೆಸುವ Civil Services Preliminary Examination -2025 ಪರೀಕ್ಷೆಯು ಬೆಂಗಳೂರು ನಗರದ ಒಟ್ಟು 86 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಯು ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ, ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು ಮತ್ತು ಸೈಬರ್ ಕಂಪ್ಯೂಟರ್ ಸೆಂಟರ್ ಗಳನ್ನು ಮುಚ್ಚುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷೆಗಳನ್ನು ಸುಗಮ ಮತ್ತು ವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವುದು ಸೂಕ್ತವೆಂದು ತಿಳಿದ ಬಂದಿರುತ್ತದೆ. ಆದ್ದರಿಂದ ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

More articles

Latest article