ನವದೆಹಲಿ: ಮೇಕೆದಾಟು ಯೋಜನೆ ಕುರಿತು ಕರ್ನಾಟಕ ಗೆಲುವಿನ ನಗೆ ಬೀರುವಂತಾಗಿದೆ. ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯದ ಯೋಜನೆಯನ್ನು ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಪೀಠ ವಜಾಗೊಳಿಸಿದೆ.
ರಾಜ್ಯದ ಪಾಲಿಗೆಈ ತೀರ್ಪು ಮುಂದಿನ ಹೆಜ್ಜೆ ಇಡಲು ಸಹಕಾರಿಯಾಗಿದೆ. ಹಲವು ವರ್ಷಗಳಿಂದ ತಮಿಳುನಾಡು ಈ ಯೋಜನೆಗೆ ಅಡ್ಡಗಾಲು ಹಾಕುತ್ತಲೇ ಬಂದಿತ್ತು.

