ನಮ್ಮ ಮೆಟ್ರೋದಲ್ಲಿ ಮತ್ತೊಂದು ಅವಘಡ; ಹಳಿ ಮೇಲೆ ಜಿಗಿದ ಯುವಕ

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಅವಘಡಗಳು ಮುಂದುವರಿದಿದೆ. ನಮ್ಮ ಮೆಟ್ರೋ ಜ್ಞಾನ ಭಾರತಿ ನಿಲ್ದಾಣದಲ್ಲಿ ಯುವಕನೊಬ್ಬ ಮೆಟ್ರೋ ಹಳಿಗೆ ಜಿಗಿದಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ಸಿಬ್ಬಂದಿಗಳು ಆತನ ರಕ್ಷಣೆ ಮಾಡಿದ್ದು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಮಂಗಳವಾರ ಮಧ್ಯಾಹ್ನ 2-20ರ ಸುಮಾರಿಗೆ ಘಟನೆ ನಡೆದಿದ್ದು, 2-20 ರಿಂದ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು. ನೇರಳೆ ಮಾರ್ಗದ ವೈಟ್ ಫೀಲ್ಡ್ ನಿಂದ ಚೆಲ್ಲಘಟ್ಟ ಮಾರ್ಗದಲ್ಲಿ ರೈಲು ಸ್ಥಗಿತಗೊಂಡಿದೆ.

ನಿಲ್ದಾಣದಲ್ಲಿ ನಿಂತಿದ್ದ ಯುವಕ ರೈಲಿನ ಟ್ರ್ಯಾಕ್‌ಗೆ ಜಿಗಿದಿದ್ದಾನೆ. ಈ ಸಂದರ್ಭದಲ್ಲಿ ರೈಲು ಆಗಮಿಸಿದ್ದು, ಟ್ಯಾಕ್‌ನ ಕೆಳ ಭಾಗದಲ್ಲಿ ಮಲಗಿದ್ದಾನೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ತುರ್ತು ನಿರ್ವಹಣಾ ಗುಂಡಿಯನ್ನು ಒತ್ತಿ ವಿದ್ಯುತ್‌ ಸರಬರಾಜನ್ನ ಸ್ಥಗಿತ ಮಾಡಿದ್ದಾರೆ.

ಮೆಟ್ರೋ ಸ್ಟೇಷನ್ ಕಂಟ್ರೋಲರ್ ತಂಡದವರು ಕೂಡಲೇ ಯುವಕನನ್ನು ರಕ್ಷಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಯಾವುದೇ ಗಂಭೀರ ಗಾಯಗಳು ಆಗಿಲ್ಲ ಎನ್ನಲಾಗಿದೆ. 

More articles

Latest article

Most read