ಮೆಟ್ರೋ ರೈಲು ಬರುವಾಗ ಹಳಿಗೆ ಹಾರಿ ಯುವಕ ಆತ್ಮಹತ್ಯೆ; ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಘಟನೆ

Most read

ನಮ್ಮ ಮೆಟ್ರೋ  ರೈಲು ಬರುವಾಗ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ  ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮೆಟ್ರೋ ರೈಲಿಗೆ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದಬಂದಿದೆ.

ಮೃತ ಯುವಕ ಯಾರು? ಯಾಕಾಗಿ ಆತ್ಮಹತ್ಯೆ ಮಾಡಿಕೊಂಡ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಈ ಘಟನೆಯಿಂದಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕೂಡಲೇ ಸಿಬ್ಬಂದಿ ಮೆಟ್ರೋದಿಂದ ಎಲ್ಲ ಪ್ರಯಾಣಿಕರನ್ನು ಇಳಿಸಿದ್ದಾರೆ. 

ಮಾರ್ಚ್ 21ರ ಮಧ್ಯಾಹ್ನ 2:10ರ ಸುಮಾರಿಗೆ ಮೆಟ್ರೋ ರೈಲು ಬರುತ್ತಿದ್ದನು ನೋಡಿದ ಯುವಕ ಹಳಿಗೆ ಹಾರಿದ್ದಾನೆ. ಈ ಬಗ್ಗೆ ಬಿಎಂಆರ್‌ಸಿಎಲ್‌ ಎಕ್ಸ್‌ ಮೂಲಕ ತಿಳಿಸಿದೆ. ಮಾರ್ಚ್ 21ರ ಮಧ್ಯಾಹ್ನ 2:10ರ ಸುಮಾರಿಗೆ ಹಳಿಗೆ ಹಾರಿದ್ದಾನೆ. ಈ ಬಗ್ಗೆ ಬಿಎಂಆರ್‌ಸಿಎಲ್‌ ಎಕ್ಸ್‌ ಮೂಲಕ ತಿಳಿಸಿದೆ.

ಸದ್ಯ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿದ್ದು, ಮಾಗಡಿ ರೋಡ್‌ನಿಂದ ವೈಟ್ ಫೀಲ್ಡ್‌ವರೆಗೆ ಮಾತ್ರ ಮೆಟ್ರೋ ಸಂಚಾರ ಇದೆ. ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಜಯನಗರ ಪೊಲೀಸರು ಹಾಗೂ ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

More articles

Latest article