ಭಾರತೀಯ ಸೈನಿಕರ ಶ್ರೇಯಸ್ಸಿಗೆ ಮಸೀದಿಗಳಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ: ಸಚಿವ ಜಮೀರ್ ಸೂಚನೆ

Most read

ಬೆಂಗಳೂರು :ಪಹಲ್ಗಾಮ್ ದಾಳಿ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈನಿಕರ ಪರವಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ  ರಾಜ್ಯದ ಎಲ್ಲ ಮಸೀದಿಗಳಲ್ಲಿ  ದೇಶದ ಹೆಮ್ಮಯ ಸೈನಿಕರ ಶ್ರೇಯಸ್ಸಿ ಗಾಗಿ ಹಾಗೂ ಶಕ್ತಿ ತುಂಬಲು ಶುಕ್ರವಾರದ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಈ ಕುರಿತು ವಕ್ಪ್ ಬೋರ್ಡ್ ಮುಖ್ಯ ಕಾರ್ಯನಿರ್ವಹಾಧಿಕಾರಿಗಳಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಪತ್ರ ಬರೆದು ಸೂಚನೆ ನೀಡಿದ್ದಾರೆ.

More articles

Latest article