ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಬೆಳಕಿಗೆ ಬಂದಾಗ ನಾಗೇಂದ್ರ ಪಲಾಯನ ಮಾಡುವ ಪ್ರಯತ್ನ ಮಾಡಿದೆ, 24 ಗಂಟೆಯೊಳಗೆ ಸುದ್ದಿಗೋಷ್ಠಿ ನಡೆಸಿ ಅದಕ್ಕೆ ಸ್ಪಷ್ಟೀಕರಣ ನೀಡಿದ್ದರು. ಈಗ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆಗೆ ಮುಂದಾಗಿದ್ದಾರೆ ಅದಕ್ಕೂ ಮುನ್ನ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ನಡೆಸುವುದಾಗಿ ಸಚಿವ ನಾಗೇಂದ್ರ ಹೇಳಿದ್ದಾರೆ.
ವಾಲ್ಮೀಕಿ ನಿಗಮದಲ್ಲಿ 85 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಚಂದ್ರಶೇಖರನ್ 5 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು. ಎಂಡಿ ಜೆ.ಜಿ. ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣನವರ್, ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶುಚಿಸ್ಮಿತಾ ರವುಲ್ ಎಂಬುವರ ಪಾತ್ರವಿದೆ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದರು.
ವಾಲ್ಮಿಕಿ ಅಭಿವೃದ್ಧಿ ನಿಗಮದ (Valmiki Development Corporation) ಬಹುಕೋಟಿ ಹಣ ದುರುಪಯೋಗ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿರುವ ಎಸ್ಐಟಿ (SIT) ಟೀಂ, ಒಬ್ಬೊಬ್ಬರನ್ನೇ ಬಂಧಿಸಿ, ವಿಚಾರಣೆ ನಡೆಸುತ್ತಿದೆ.
ವಿಧಾನಸೌಧದಿಂದ ಪ್ರತಿಭಟನೆ ಮೆರವಣಿಗೆ ನಡೆಸಿದ ಬಿಜೆಪಿ ನಾಯಕರು, ಸಚಿವ ಬಿ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿದರು. ಹಗರಣದಲ್ಲಿ ಬಿ ನಾಗೇಂದ್ರ ಅವರ ಪಾತ್ರ ಇದೆ. ಸಚಿವರ ಆಪ್ತನ ಬಂಧನ ಆಗಿದೆ. ಈ ನಿಟ್ಟಿನಲ್ಲಿ ನಾಗೇಂದ್ರ ಅವರ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯ ಪಡೆಯಬೇಕು ಎಂಬುದು ಬಿಜೆಪಿ ಆಗ್ರಹವಾಗಿದೆ.