ರಾಜ್ಯದಲ್ಲಿ ಶೋಷಿತರ ಸಮಾವೇಶ ನಡೆಸಲು ಸಚಿವ ರಾಜಣ್ಣ ಒಲವು

Most read

ನವದೆಹಲಿ: ರಾಜ್ಯದಲ್ಲಿ ಶೋಷಿತರ ಸಮಾವೇಶ ನಡೆಸಲು ನಿರ್ಧರಿಸಲಾಗಿದ್ದು, ಪಕ್ಷದ ವರಿಷ್ಠರು ಭಾಗವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೂ ಆಹ್ವಾನ ನೀಡುತ್ತೇವೆ ಎಂದು ಹೇಳಿದ್ದಾರೆ.

ತುಮಕೂರು ಜಿಲ್ಲೆ ಹಾಗೂ ಪಕ್ಷ ಸಂಘಟನೆಗೆ ಗಮನ ನೀಡಬೇಕಿರುವುದರಿಂದ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬಿಡುಗಡೆ ಮಾಡಿ ಎಂದು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಮಾಡಿಕೊಂಡಿದ್ದೇನೆ. ಪಕ್ಷದ ಹಿರಿಯ ಮುಖಂಡರನ್ನು ಭೇಟಿ ಮಾಡಿದ್ದೇನೆ. ಖರ್ಗೆ ಅವರನ್ನು ಭೇಟಿಯಾಗಿ, ಸರ್ಕಾರ ಮತ್ತು ಪಕ್ಷದ ಬೆಳವಣಿಗೆ ಕುರಿತು ಅವರ ಗಮನಕ್ಕೆ ತಂದಿದ್ದೇನೆ. ಆದರೆ ಯಾವ ಯಾವ ವಿಚಾರಗಳನ್ನು ಕುರಿತು ಚರ್ಚೆ ಮಾಡಿದ್ದೇನೆ ಎಂದು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

ವರಿಷ್ಠರಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣದ ಬೆಳವಣೀಗೆಗಳನ್ನು ಕುರಿತು ಚರ್ಚಿಸಿದ್ದೇನೆ. ಕಲೆವು ವಿಷಯಗಳನ್ನು ಕುರಿತು ಲಿಖತ ರೂಪದಲ್ಲಿ ಮನವಿ ಸಲ್ಲಿಸಿದ್ದೇನೆ. ಪಕ್ಷವನ್ನು ಸಂಘಟಿಸಿ 2028ರಲ್ಲಿ ಮತ್ತೆ ಪಕ್ಷ ಅಧಿಕಾರಕ್ಕೆ ಬರಬೇಕಿದೆ. ನಾನು ಗಮನಕ್ಕೆ ತಂದ ಅಂಶಗಳನ್ನು ಕುರಿತು ಮುಖಂಡರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. ಪಕ್ಷ ಸಂಘಟನೆಗೆ ಪೂರಕವಾಗಿ ಸಲಹೆಗಳನ್ನು ನೀಡಿದ್ದೇನೆ. ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗದ ಕೆಳ ಸಮುದಾಯದ ನಾಯಕರಿಗೆ ಅವಕಾಶ ನೀಡಿದರೆ ಆ ಸಮುದಾಯಗಳ ಬೆಂಬಲ ಪಕ್ಷಕ್ಕೆ ಸಿಗಲಿದೆ ಎಂದು ಹೇಳಿರುವುದಾಗಿ ರಾಜಣ್ಣ ತಿಳಿಸಿದ್ದಾರೆ.

More articles

Latest article