ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣ ಸಂಬಂಧ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರಿಗೆ ಸಲ್ಲಿಸಲಾಗಿದ್ದ ಮನವಿಯನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರಿಗೆ ವರ್ಗಾಯಿಸಲಾಗಿದೆ. ರವಾಸಲಾಗಿದೆ. ಡಿಜಿ ಅವರು ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಪ್ರಾಥಮಿಕ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಸಿಐಡಿ ಡಿಜಿಪಿ ಸಲೀಂ ನೇತೃತ್ವದ ತಂಡ ಪ್ರಾಥಮಿಕ ತನಿಖೆಗೆ ಮುಂದಾಗಿದ್ದು, ಇಂದು ಬೆಳಿಗ್ಗೆ ಸಚಿವ ಕೆ.ಎನ್.ರಾಜಣ್ಣ ಅವರ ಜಯಮಹಲ್‌ನಲ್ಲಿರುವ ಸರ್ಕಾರಿ ನಿವಾಸಕ್ಕೆ ಬಂಗಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಸಿಐಡಿ ತಂಡ ರಾಜಣ್ಣ ಅವರ ತುಮಕೂರು ನಿವಾಸಕ್ಕೂ ತೆರಳಿ ಪರಿಶೀಲನೆ ನಡೆಸಲಿದೆ. ನಂತರ ಪ್ರಕರಣವನ್ನು ಎಸ್ ಐ ಟಿ ಗೆ ವಹಿಸುವ ಬಗ್ಗೆ ತೀರ್ಮಾನಿಸಲಿದೆ.