ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳನ್ನುಆಹ್ವಾನಿಸಿದ ಸಚಿವ ಶಿವರಾಜ್. ಎಸ್.ತಂಗಡಗಿ

ಕೊಪ್ಪಳ : ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಗವಿಸಿದ್ದೇಶ್ವರ ಶ್ರೀಗಳನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್. ಎಸ್.ತಂಗಡಗಿ ಅವರು ಸೋಮವಾರ ಫಲಪುಷ್ಪ ನೀಡಿ ಅಧಿಕೃತವಾಗಿ ಆಹ್ವಾನಿಸಿದರು.

ಈ ಬಾರಿ ದಸರಾ ಉದ್ಘಾಟನೆಗೆ ಒಪ್ಪಿಕೊಂಡ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಆಹ್ವಾನ ನೀಡಲಾಗಿದೆ. ಈ ಸಂದರ್ಭದಲ್ಲಿ ಸಂಸದ ರಾಜಶೇಖರ್ ಹಿಟ್ನಾಳ್ , ಶಾಸಕ ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ನಾಗಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಹಾಗೂ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಉಪಸ್ಥಿತರಿದ್ದರು.

ಸಚಿವ ಶಿವರಾಜ್ ತಂಗಡಗಿ ಅವರು, ಅಕ್ಟೋಬರ್ 10ರ ಸಂಜೆಯೇ ಅಂದರೆ ಉದ್ಘಾಟನೆಯ ಹಿಂದಿನ ದಿನವೇ ಮೈಸೂರಿಗೆ ಆಗಮಿಸಬೇಕೆಂದು ಶ್ರೀಗಳಲ್ಲಿ ಮನವಿ ಮಾಡಿದರು. ಅಷ್ಟೇ ಅಲ್ಲದೆ, ತಾವು ದಸರಾದ ಇಡೀ 11 ದಿನಗಳ ಕಾಲ ಮೈಸೂರಿನಲ್ಲೇ ಇದ್ದು ಭಾಗಿಯಾಗಬೇಕು ಎಂದು ವಿನಂತಿಸಿಕೊಂಡರು.

More articles

Latest article

Most read