Saturday, July 27, 2024

ಕಲಬುರಗಿ | ಅಪ್ರಾಪ್ತ ಬಾಲಕರಿಂದ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

Most read

ಇಬ್ಬರು ಅಪ್ರಾಪ್ತ ಬಾಲಕರು 10 ವರ್ಷದ ಬಾಲಕಿಯ ಮೇಲೆ ಚಾಕು ತೋರಿಸಿ ಅತ್ಯಾಚಾರವೆಸಗಿದ ಅದನ್ನು ವಿಡಿಯೋ ಮಾಡಿರುವ ಘಟನೆ ಮಂಗಳವಾರ ಕಲಬುರಗಿ ಜಿಲ್ಲೆಯಲ್ಲಿ ವರದಿಯಾಗಿದೆ.


ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೋಷಕರು ಕೆಲಸದ ನಿಮಿತ್ತ ಮುಂಬೈಗೆ ತೆರಳಿದ್ದ ಕಾರಣ ಬಾಲಕಿ ಸಂಬಂಧಿಕರೊಂದಿಗೆ ವಾಸವಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.


ಬಾಲಕಿ ಶಾಲೆಗೆ ಹೋಗುತ್ತಿದ್ದಾಗ, 14 ಮತ್ತು 16 ವರ್ಷ ವಯಸ್ಸಿನ ಇಬ್ಬರು ಹುಡುಗರು ಅವಳನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಈ ಕೃತ್ಯ ಎಸಗಿದ್ದಾರೆ.


ಬಾಲಕಿಗೆ ಚಾಕುವಿನಿಂದ ಬೆದರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದು, ತಮ್ಮ ಮೊಬೈಲ್‌ನಲ್ಲಿ ಕೃತ್ಯವನ್ನು ರೆಕಾರ್ಡ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.


ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

More articles

Latest article