ಶರ್ಟ್ ಬಟನ್ ಹಾಕದ ವಕೀಲನಿಗೆ 6 ತಿಂಗಳ ಜೈಲು ಶಿಕ್ಷೆ

ಅಲಹಾಬಾದ್ : ವಕೀಲರ ನಿಲುವಂಗಿ ಧರಿಸದೆ ಮತ್ತು ಶರ್ಟ್ ಬಟನ್ ಬಿಚ್ಚಿಕೊಂಡು ನ್ಯಾಯಾಲಯಕ್ಕೆ ಹಾಜರಾದ ವಕೀಲರೊಬ್ಬರಿಗೆ ಅಲಹಾಬಾದ್ ಹೈಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.2021ರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸ್ಥಳೀಯ ವಕೀಲ ಅಶೋಕ್ ಪಾಂಡೆ ಸರಿಯಾದ ಸಮವಸ್ತ್ರ ಧರಿಸದೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ರೀತಿ ನ್ಯಾಯಾಲಯಕ್ಕೆ ಬರಬಾರದು ಎಂದು ಪಾಂಡೆ ನ್ಯಾಯಾಧೀಶರನ್ನು ಗೂಂಡಾಗಳು ಎಂದು ಕರೆದಿದ್ದರು. ಬಳಿಕ ನ್ಯಾಯಾಧೀಶರು ಅವರನ್ನು ಹೊರಗೆ ಕಳಿಸಿದ್ದರು. ಈ ಸಂಬಂಧ ನ್ಯಾಯಾಲಯ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು ಎಂದು ತಿಳಿದು ಬಂದಿದೆ.

ಈ ಪ್ರಕರಣ ಕುರಿತು ನ್ಯಾಯಮೂರ್ತಿಗಳಾದ ವಿವೇಕ್ ಚೌಧರಿ ಮತ್ತು ಬಿ.ಆರ್. ಸಿಂಗ್ ಅವರನ್ನೊಳಗೊಂಡ ವಿಭಾಗೀಯ ಪೀಠ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಲಕ್ನೋ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಶರಣಾಗಲು ವಕೀಲ ಪಾಂಡೆಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಅಲ್ಲದೆ 2,000 ರೂಪಾಯಿ ದಂಡ ಪಾವತಿಸಲು ಸೂಚಿಸಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಒಂದು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದೆ.

ತಪ್ಪಿತಸ್ಥ ವಕೀಲನನ್ನು ಅಲಹಾಬಾದ್ ಹೈಕೋರ್ಟ್ ಮತ್ತು ಅದರ ಲಕ್ನೋ ಪೀಠದ ವೃತ್ತಿಯಿಂದ ಏಕೆ ನಿರ್ಬಂಧಿಸಬಾರದು? ಎಂದು ಅವರ ಪರ ವಕೀಲರಿಗೆ ಶೋಕಾಸ್ ನೋಟಿಸ್ ನೀಡಿದೆ. ನೋಟಿಸ್‌ಗೆ ಪ್ರತಿಕ್ರಿಯೆ ಕೊಡಲು ವಕೀಲರಿಗೆ ಮೇ 1ರವರೆಗೆ ಸಮಯಾವಕಾಶ ನೀಡಿದೆ. ಆರೋಪದ ಗಾಂಭೀರ್ಯತೆ, ಅಶೋಕ್ ಪಾಂಡೆಯ ಹಿಂದಿನ ನಡವಳಿಕೆ ಹಾಗೂ ವಿಚಾರಣೆಯಲ್ಲಿ ಪಾಲ್ಗೊಳ್ಳಲು ಅವರ ನಿರಾಕರಣೆಯ ಕಾರಣಕ್ಕೆ ಶಿಕ್ಷೆ ವಿಧಿಸುವುದು ಅನಿವಾರ್ಯ  ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಕೀಲ ಪಾಂಡೆ ಈ ಹಿಂದೆಯೂ ನ್ಯಾಯಾಂಗ ನಿಂದನೆ ಆರೋಪ ಎದುರಿಸಿದ್ದರು. 2017 ರಲ್ಲಿ, ಅವರು ಅಲಹಾಬಾದ್ ಹೈಕೋರ್ಟ್ ಮತ್ತು ಲಕ್ನೋ ಪೀಠದ ಆವರಣಕ್ಕೆ ಎರಡು ವರ್ಷಗಳ ಕಾಲ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿತ್ತು.

More articles

Latest article

Most read