ದಾರಿ ತಪ್ಪಿಸುವ ಜಾಹೀರಾತು: ಸುಪ್ರೀಂ ಕೋರ್ಟ್ಗೆ ಬೇಷರತ್ ಕ್ಷಮೆ ಯಾಚಿಸಿದ ಪತಂಜಲಿ

Most read

ಹೊಸದಿಲ್ಲಿ: ಸಂಸ್ಥೆಯ ಉತ್ಪನ್ನಗಳ ಜಾಹೀರಾತಿನಲ್ಲಿ ಅವುಗಳ ಔಷಧೀಯ ಪರಿಣಾಮಗಳ ಕುರಿತಂತೆ ತಪ್ಪುದಾರಿಗೆಳೆದು ಸುಪ್ರೀಂ ಕೋರ್ಟ್‌ ಕೆಂಗಣ್ಣಿಗೆ ಗುರಿಯಾಗಿದ್ದ ಪತಂಜಲಿ ಸಂಸ್ಥೆ ಕ್ಷಮೆ ಯಾಚಿಸಿದೆ.

ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಮತ್ತು ಯೋಗ ಗುರು ರಾಮ್ದೇವ್ ಅವರ ಸಹಾಯಕ ಆಚಾರ್ಯ ಬಾಲಕೃಷ್ಣ ಈ ಕುರಿತು ಸುಪ್ರೀಂ ಕೋರ್ಟ್ಗ ಪ್ರಮಾಣಪತ್ರವೊಂದನ್ನು ಸಲ್ಲಿಸಿದ್ದು, ದೇಶದ ನ್ಯಾಯದಾನ ವ್ಯವಸ್ಥೆಯ ಕುರಿತು ತಮಗೆ ಗೌರವವಿದ್ದು, ಈ ಸಂಬಂಧ ಬೇಷರತ್‌ ಕ್ಷಮೆ ಯಾಚಿಸುವುದಾಗಿ ತಿಳಿಸಿದ್ದಾರೆ.

ಪತಂಜಲಿ ಸಂಸ್ಥೆಯ ದಾರಿ ತಪ್ಪಿಸುವ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೋಟೀಸಿಗೆ ಉತ್ತರಿಸದ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿ, ಯೋಗಗುರು ರಾಮ್‌ ದೇವ್‌ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ನ್ಯಾಯಾಲಯಕ್ಕೆ ಹಾಜರಾಗಲು ಆದೇಶಿಸಲಾಗಿತ್ತು.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಸಾನುದ್ದೀನ್‌ ಅಮಾನುಲ್ಲಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ ವಿಭಾಗೀಯ ಪೀಠ ನ್ಯಾಯಾಲಯದ ಆದೇಶವನ್ನು ಪಾಲಿಸದ ಪತಂಜಲಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಪತಂಜಲಿ ಸಂಸ್ಥೆಯ ಕ್ಷಮೆ ಯಾಚನೆಯ ಪ್ರಮಾಣ ಪತ್ರ ಸಲ್ಲಿಕೆಯಾಗಿದೆ.

ಈ ಬಗೆಯ ದಾರಿತಪ್ಪಿಸುವ ಜಾಹೀರಾತುಗಳನ್ನು ಭವಿಷ್ಯದಲ್ಲಿ ಪ್ರಸಾರ ಮಾಡುವುದಿಲ್ಲ. ದೇಶದ ನಾಗರಿಕರು ಸಂಸ್ಥೆಯ ಉತ್ಪನ್ನಗಳನ್ನು ಬಳಸಿ ಆರೋಗ್ಯವಂತರಾಗಲಿ ಎಂಬುದಷ್ಟೆ ನಮ್ಮ ಉದ್ದೇಶವಾಗಿತ್ತು. ಆಯುರ್ವೇದಕ್ಕೆ ಸಂಬಂಧಿಸಿದ ಪುರಾತನವಾಗಿ ಸಾಹಿತ್ಯವನ್ನು ಆಧಾರವಾಗಿಟ್ಟುಕೊಂಡು ಸಂಶೋಧನೆಗಳ ಮೂಲಕ ಖಾಯಿಲೆಗಳಿಗೆ ಔಷಧಿ ಹುಡುಕುವುದು ನಮ್ಮ ಗುರಿ ಎಂದು ಪ್ರಮಾಣಪತ್ರದಲ್ಲಿ ಪತಂಜಲಿ ಸಂಸ್ಥೆಯ ಬಾಲಕೃಷ್ಣ ತಿಳಿಸಿದ್ದಾರೆ.

More articles

Latest article