ಡಿಕೆಶಿ ವಿರುದ್ಧ ತನಿಖೆ ಹಿಂಪಡೆದ ರಾಜ್ಯ ಸರ್ಕಾರ; ತನಿಖೆ ಮುಂದೂಡಿದ ಸುಪ್ರೀಂ ಕೋರ್ಟ್‌  

ನವದೆಹಲಿ: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತಡೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿದೆ.

ನ್ಯಾ. ಸೂರ್ಯ ಕಾಂತ್ ಹಾಗೂ ನ್ಯಾ. ಉಜ್ವಲ್ ಭುಯನ್ ಅವರಿದ್ದ ದ್ವಿಸದಸ್ಯ ಪೀಠ  ಸೋಮವಾರ ಅರ್ಜಿಯ ವಿಚಾರಣೆ ನಡೆಸಿತು. ಕರ್ನಾಟಕ ಹೈಕೋರ್ಟ್‌ ತೀರ್ಪಿನ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದೆ ಎಂಬ ಅಂಶವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ಅವರು ಪೀಠದ ಗಮನಕ್ಕೆ ತಂದರು.

ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ಆದರೆ ರಾಜ್ಯ ಸರ್ಕಾರ ಈ ಅನುಮತಿಯನ್ನು ಹಿಂಪಡೆದಿತ್ತು. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ ಅವರ ಅರ್ಜಿಯೂ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ. ಇದಕ್ಕೆ ಸಂಬಂಧಿಸಿದಂತೆ ಸೆ. 17ರಂದು ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿತ್ತು. ನೋಟಿಸ್‌ ಗೆ ಉತ್ತರಿಸಲು ಶಿವಕುಮಾರ್ ಪರ ವಕೀಲ ರಂಜಿತ್ ಕುಮಾರ್ ಕಾಲಾವಕಾಶ ಕೇಳಿರುವುದರಿಂದ ಸಿಬಿಐ ಮನವಿಯ ವಿಚಾರಣೆಗೆ ದಿನಾಂಕ ನಿಗದಿಯಾಗಿಲ್ಲ ಎಂಬ ಅಂಶವನ್ನು ತುಷಾರ್ ಮೆಹಾ ಅವರು ನ್ಯಾಯಾಲಯದ ಗಮನಕ್ಕೆ ತಂದರು.

ಪ್ರಕರಣದ ಹಿನ್ನೆಲೆ?:

2013ರಿಂದ 2018ರವರೆಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಶಿವಕುಮಾರ್‌ ಒಟ್ಟು ರೂ.74.93 ಕೋಟಿಯಷ್ಟು ಆದಾಯಕ್ಕಿಂತ ಹೆಚ್ಚಿನ ಹಣ ಗಳಿಕೆ ಪ್ರಕರಣವನ್ನು ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು. ಆದರೆ 2023ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ರಾಜ್ಯ ಸರ್ಕಾರ ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಿತ್ತು. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಯನ್ನು ಹಿಂಪಡೆದಿರುವುದನ್ನು ಸಿಬಿಐ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಆದರೆ ಸಿಬಿಐ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ತನಿಖೆ ಮುಂದುವರೆದಿದೆ.

More articles

Latest article

Most read