ಬೆಂಗಳೂರು: ಶಿಷ್ಟಾಚಾರದ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು ದುಬೈನಿಂದ ಚಿನ್ನವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪಿಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.
ರಾಜ್ಯ ಪೊಲೀಸ್ ಗೃಹ ನಿರ್ಮಾಣ ಹಾಗೂ ಮೂಲ ಸೌಕರ್ಯದ ವ್ಯವಸ್ಥಾಪಕ ನಿರ್ದೇಶಕ (ಡಿಜಿಪಿ) ಕೆ. ರಾಮಚಂದ್ರ ರಾವ್ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲು ಗುಪ್ತ ಅವರನ್ನು ನೇಮಿಸಲಾಗಿದೆ. ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ.
ಚಿತ್ರನಟಿ ರನ್ಯಾರಾವ್ ಅವರು ತಮ್ಮ ಮಲ ತಂದೆ ರಾಮಚಂದ್ರರಾವ್ ಹೆಸರನ್ನು ಬಳಸಿಕೊಂಡು ಯಾವುದೇ ತಪಾಸಣೆಗೆ ಒಳಪಡದೆ ಸುಲಭವಾಗಿ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದರು.