ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಒಲಿದ ಪ್ರತಿಷ್ಠಿತ ‘ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

Most read

ಹಿರಿಯ ನಟ ಮಿಥುನ್ ಚಕ್ರವರ್ತಿ ಈಗ ಭಾರತದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಅವರ ಪ್ರಯಾಣ ಹಾಗೂ ಸಿನಿ ರಂಗಕ್ಕೆ ನೀಡಿದ ಕೊಡುಗೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ಭಾರತದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಭೂಷಣ ಪಡೆದ ಕೆಲವೇ ತಿಂಗಳಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಮಿಥುನ್ ಚಕ್ರವರ್ತಿ ಅವರು ಕೇವಲ ನಟರಷ್ಟೇ ಅಲ್ಲ, ಟಿವಿ ನಿರೂಪಕ, ನಿರ್ಮಾಪಕ, ರಾಜಕಾರಣಿ ಆಗಿದ್ದಾರೆ. ಹಿಂದಿ ಹಾಗೂ ಬಂಗಾಳಿ ಸಿನಿಮಾಗಳಲ್ಲಿ ಅತ್ಯಂತ ಹೆಚ್ಚು ಹೆಸರು ಪಡೆದಿದ್ದಾರೆ. ಇವರು 1976ರಲ್ಲಿ ಮೊದಲ ಬಾರಿಗೆ ಹಿಂದಿ ಸಿನಿಮಾ ಮೃಗಯಾದಲ್ಲಿ ಅಭಿನಯ ಮಾಡಿದ್ದರು. ಅಂದಿನಿಂದ ಈವರೆಗೂ ಚಿತ್ರರಂಗದಲ್ಲಿ ದುಡಿಯುತ್ತಿದ್ದಾರೆ.

ಈ ಸಂಬಂಧ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಶೇರ್ ಮಾಡಿರುವ ಕೇಂದ್ರ ರೈಲ್ವೆ ಹಾಗೂ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು, ಮಿಥುನ್ ಚಕ್ರವರ್ತಿ ಅವರ ಗಮನಾರ್ಹ ಸಿನಿ ಜರ್ನಿ ಈಗಿನ ಮತ್ತು ಬರುವ ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ. ಭಾರತೀಯ ಚಿತ್ರರಂಗಕ್ಕೆ ಅವರ ಅಪ್ರತಿಮ ಕೊಡುಗೆ ಗಮನಿಸಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ತೀರ್ಪುಗಾರರ ಆಯ್ಕೆ ಸಮಿತಿಯು ಅವರ ಹೆಸರನ್ನು ಆಯ್ಕೆ ಮಾಡಿದ್ದಾರೆ. ಈ ಗೌರವವನ್ನು ಅಕ್ಟೋಬರ್ 08 ರಂದು ನಡೆಯುವ ನ್ಯಾಷನಲ್ ಫಿಲಂ ಅವಾರ್ಡ್​ ಸಮಾರಂಭದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಮಿಥುನ್ ಚಕ್ರವರ್ತಿ ಜನಿಸಿದ್ದು 1950ರಲ್ಲಿ. ಮಿಥುನ್ ಚಕ್ರವರ್ತಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು 1976ರಲ್ಲಿ. 26ನೇ ವಯಸ್ಸಿಗೆ ಅವರು ಹೀರೋ ಆದರು. ‘ಮೃಗಯಾ’ ಅವರ ನಟನೆಯ ಮೊದಲ ಸಿನಿಮಾ. ಅವರಿಗೆ ಮೊದಲ ಸಿನಿಮಾದ ನಟನೆಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು.

More articles

Latest article