ಶಾಸಕ ಅಶ್ವತ್ಥ್ ನಾರಾಯಣ ಲೂಟಿಕೋರರ ಪಿತಾಮಹ : ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್ ವಾಗ್ದಾಳಿ

Most read

ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಲೂಟಿಕೋರರ ಪಿತಾಮಹ ಎಂದು ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಚರ್ಚೆಯಾಗುವ ವೇಳೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಹಗಲು ದರೋಡೆ ಮಾಡಿರುವ ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಅವರು ಸದನಕ್ಕೆ ಹಾಜರಾಗಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಸಿದ್ದರಾಮಯ್ಯ ಅವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ವಿಷಯ ಪ್ರಸ್ತಾಪ ಮಾಡಿದಾಗೆಲ್ಲ ಬಿಜೆಪಿಯ ಮುಖ್ಯಮಂತ್ರಿಗಳು ಸದನದಲ್ಲಿ ಹಾಜರಿರುತ್ತಿದ್ದರೇ? ಅವರು ಗೈರಾಗಿರಲಿಲ್ಲವೇ? ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಶ್ವತ್ಥ್ ನಾರಾಯಣ ಅವರು ಮಾಡಬಾರದನ್ನು ಮಾಡಿರುವುದಕ್ಕೇ ಜನ ನಮ್ಮನ್ನು ಇಲ್ಲಿ ಕೂರಿಸಿ, ನಿಮ್ಮನ್ನು ಅಲ್ಲಿ ಕೂರಿಸಿ ತೀರ್ಪು ಕೊಟ್ಟಿದ್ದಾರೆ” ಎಂದು ಹರಿಹಾಯ್ದರು. “ನನ್ನ ವಿರುದ್ದ ಮಾಡಿದ ಆಪಾದನೆ ಹಿಟ್ ಅಂಡ್ ರನ್” ಎಂದು ಅಶ್ವತ್ಥ್ ನಾರಾಯಣ ಗದ್ದಲ ಎಬ್ಬಿಸಿದಾಗ “ರಾಮನಗರದ ಕಸ ಗುಡಿಸುತ್ತೇನೆ ಎಂದು ಹೇಳಿದ ನಿಮಗೆ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಒಂದು ಸೀಟು ಗೆಲ್ಲಲು ಆಗಲಿಲ್ಲ” ಅಶ್ವಥ್ ನಾರಾಯಣ್ ಒಬ್ಬ ಲೂಟಿಕೋರರ ಪಿತಾಮಹ ಎಂದು ಡಿಸಿಎಂ ಕುಟುಕಿದರು.

More articles

Latest article