ಶಾಸಕ ಬೈರತಿ ಬಸವರಾಜ್‌ಗೆ ಜಾಮೀನು

ಬೆಂಗಳೂರು :  ರೌಡಿ ಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದರಿಂದ ಬಸವರಾಜು ಅವರನ್ನು ಬಂಧಿಸಲು ಸಿಐಡಿ ಪೊಲೀಸರು ಮುಂದಾಗಿದ್ದರು. ಈ ವೇಳೆ ಅವರು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರೂ ಅವರಿಗೆ ಜಾಮೀನು ದೊರೆಯಲಿಲ್ಲ. ಹೀಗಾಗಿ ಅವರು ಅಹಮದಾಬಾದ್‌ನಲ್ಲಿ ತಲೆಮರೆಸಿಕೊಂಡಿದ್ದರು.  ಜಾಮೀನು ಅರ್ಜಿ ವಜಾಗೊಂಡ ಬಳಿಕ ಅವರು ಪೊಲೀಸರ ಮುಂದೆ ಶರಣಾಗಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಪೊಲೀಸರು ಬಂಧಿಸಿದ್ದರು.

 ಜನಪ್ರತಿನಿಧಿಗಳ ಕೋರ್ಟ್ 2 ಲಕ್ಷ ರೂ. ಮೊತ್ತದ ಬಾಂಡ್ ಹಾಗೂ ಇಬ್ಬರು ಶ್ಯೂರಿಟ ನೀಡಬೇಕು.  ಸಾಕ್ಷ್ಯಾಧಾರ ನಾಶಪಡಿಸುವಂತಿಲ್ಲ, ಸಾಕ್ಷಿಗಳನ್ನು ಬೆದರಿಸುವಂತಿಲ್ಲ, ಕೋರ್ಟ್ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ. ತನಿಖಾಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ಹಾಕಿ ಜಾಮೀನು ಮಂಜೂರು ಮಾಡಿದೆ.

More articles

Latest article

Most read