ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ.ಆರ್. ಪಾಟೀಲ ರಾಜೀನಾಮೆ

Most read

ಬೆಂಗಳೂರು: ದಿಡೀರ್‌ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ( ನೀತಿ ಮತ್ರು ಕಾರ್ಯಕ್ರಮ) ಸ್ಥಾನಕ್ಕೆ ಶಾಸಕ ಬಿ.ಆರ್. ಪಾಟೀಲ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಆಳಂದ ಶಾಸಕರೂ ಆಗಿರುವ ಬಿ.ಆರ್. ಪಾಟೀಲ ಸ್ಪಷ್ಟಪಡಿಸಿದ್ದಾರೆ. ರಾಜ್ಯ ಸರ್ಕಾರ ನೀಡಿರುವ ಸೌಲಭ್ಯಗಳನ್ನು ಹಿಂದಿರುಗಿಸಿರುವುದಾಗಿ ಅವರು ತಿಳಿಸಿದ್ದಾರೆ.

ಬಿಆರ್ ಪಾಟೀಲ್ ಅವರು ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ರಾಜಕಿಯ ಸಲಹೆಗಾರರಗಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ದಿಢೀರ್ ರಾಜೀನಾಮೆ ನೀಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ಕೂಡಾ ಅವರು ಅನುದಾನ ನೀಡುವಿಕೆಯಲ್ಲಿ ತಾರತಮ್ಯ ಆಗುತ್ತಿದೆ ಇದೆ ಎಂದು ವರಿಷ್ಠರಿಗೆ ಪತ್ರ ಬರೆಯುವ ಮೂಲಕ ಅಸಮಾಧಾನ ಹೊರಹಾಕಿದ್ದರು.

More articles

Latest article