ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲು ನಿಗದಿಪಡಿಸಿರುವ ಶಾಸಕಾಂಗ ಸಭೆ ಸಂಜೆ ನಡೆದಿದ್ದು, ಸಭೆ ಯಶಸ್ವಿಯಾಗಿದೆ. ಶಾಸಕರೆಲ್ಲರೂ ನಾವು ನಿಮ್ಮೊಂದಿಗಿದ್ದೇವೆ ಎಂದು ಸಿಎಂಗೆ ಒಕ್ಕೊರಲ ಬೆಂಬಲ ಸೂಚಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟಿ ಪೂರ್ವಾನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜಕೀಯ ಸಮರ ತೀವ್ರಗೊಂಡಿದೆ. ಇದಕ್ಕೆ ಎದೆಗುಂದಬೇಡಿ ನೀವು ಏನೆಂಬುದ ನಮಗೆಲ್ಲರಿಗೂ ಗೊತ್ತಿದೆ. ನಾವು ನಿಮ್ಮೊಂದಿಗೆ ಇರುತ್ತೇವೆ. ಕಾನೂನು ಮೂಲಕ ಹೋರಾಡೋಣ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ನೀಡಿದೆ. ಸಚಿವರು ಕೂಡ ನೈತಿಕ ಬೆಂಬಲ ಸೂಚಿಸಿದ್ದಾರೆ. ಈಗ ಶಾಸಕರೆಲ್ಲರೂ ಸಿಎಂಗೆ ಬೆಂಬಲ ಸೂಚಿಸಿದ್ದು ಸಿದ್ದರಾಮಯ್ಯ ಅವರಿಗೆ ಆನೆ ಬಲ ಬಂದಂತಾಗಿದೆ.
ಹೇಗಾದರು ಮಾಡಿ ಸಿಎಂ ಸಿದ್ದರಾಮಯ್ಯ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಿ ಸಿಎಂ ಸ್ಥಾನದಿಂದ ಇಳಿಸೋಣ ಎಂಬ ಕನಸ್ಸು ಕಂಡಿದ್ದ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ತೀರ್ಮಾನದಿಂದ ನಿರಾಸೆ ಉಂಟಾಗಿದೆ.