ಸಿದ್ದರಾಮಯ್ಯರನ್ನು ಸಿಎಂ ಮಾಡಿರೋದು ಪಕ್ಷ ಅಲ್ಲ ಶಾಸಕರು: ಮಳವಳ್ಳಿ ಶಾಸಕ ನರೇಂದ್ರಸ್ವಾಮಿ

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಪಕ್ಷ ಆಯ್ಕೆ ಮಾಡಿಲ್ಲ ಶಾಸಕರ ಅಭಿಪ್ರಾಯದ ಮೇರೆಗೆ ಅವರನ್ನ ಮುಖ್ತಮಂತ್ರಿಗಳನ್ನಾಗಿ ಮಾಡಿದ್ದಾರೆ ಎಂದು ಮಂಡ್ಯದ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹೇಳಿದ್ದಾರೆ.

ಮಳವಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ನರೇಂದ್ರಸ್ವಾಮಿ, ಈಗಲೂ ನಮ್ಮ ಪಕ್ಷ ಶಾಸಕರ ಬಹುಮತದ ಅಭಿಪ್ರಾಯಕ್ಕೆ ಬದ್ಧವಾಗಿದೆ. 2013ರಲ್ಲೂ ವೋಟಿಂಗ್ ಮಾಡಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಲಾಯ್ತು. ಇದು ನಮ್ಮ ಪಕ್ಷದ ಇಂಟರ್ನಲ್ ಡೆಮಾಕ್ರಸಿ. ಈಗಲೂ ನಮ್ಮ ಪಕ್ಷ ಇಂಟರ್ನಲ್ ಡೆಮಾಕ್ರಸಿಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಪಕ್ಷದ ಭವಿಷ್ಯ ದೃಷ್ಟಿಯಿಂದ ಸಮಯ ಸಂದರ್ಭ ನೋಡಿ ಬೇರೆಯವರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಯಾರನ್ನೋ ಓಲೈಕೆಗೆ ಹಾಗೂ ಹೊಗಳಿಕೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಮಾತನಾಡಬಾರದು. ಮೊದಲನೇ ಬಾರಿ ಆಯ್ಕೆಯಾಗಿ ಬಂದ ಶಾಸಕರು ಬಹಳ ಹಾರಾಡುತ್ತಿದ್ದಾರೆ. ಈ ವಿಚಾರವನ್ನ ಬಹಿರಂಗವಾಗಿ ಮಾತನಾಡದೇ ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು ಎಂಧು ಸಲಹೆ ನೀಡಿದ್ದಾರೆ.

ಮಂಡ್ಯದಲ್ಲಿ ಅತಿಹೆಚ್ಚು ಕಾಲ ಕಾಂಗ್ರೆಸ್ ಪಕ್ಷ ಕಟ್ಟಿದವನು ನಾನೇ. ನನಗೆ ಅನ್ಯಾಯ ಆಯ್ತು ಅಂತಾ ಬೀದಿಯಲ್ಲಿ ಮಾತನಾಡೋಕೆ ಆಗುತ್ತಾ? ಬೇರೆ ಸಚಿವರಿಗಿಂತಲೂ ಯೋಗ್ಯತೆ, ಅರ್ಹತೆ, ಸೀನಿಯಾರಿಟಿ ನನಗಿದೆ. ಆದರೆ ಪಕ್ಷದ ತೀರ್ಮಾನವನ್ನು ತಲೆಬಾಗಿ ಒಪ್ಪಿದ್ದೇನೆ. ಅದರಂತೆ ಎಲ್ಲರೂ ಇರಬೇಕು ಎಂದು ಹೇಳಿದ್ದಾರೆ.

More articles

Latest article

Most read