ದೇವದುರ್ಗ (Devadurga) ಶಾಸಕಿ ಕರೆಮ್ಮ ನಾಯಕ್ (Karemma Nayak) ಪಿ.ಎಗಳ ಮೇಲೆ ಜಾತಿ ನಿಂದನೆ ಕೇಸ್ ದಾಖಲಾದ ಹಿನ್ನೆಲೆ ಶಾಸಕಿ ಕರೆಮ್ಮ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ (Protest) ನಡೆಸಿದ್ದಾರೆ.
ಪುತ್ರ, ಸಹೋದರ ಹಾಗೂ ಆಪ್ತ ಕಾರ್ಯದರ್ಶಿ ಪರವಹಿಸಿ ರಾಯಚೂರಿನ (Raichur) ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಪ್ರತಿಭಟನೆ ನಡಸಿದ್ದಾರೆ. ತನಿಖೆ ಮಾಡದೇ ಹೇಗೆ ಅಟ್ರಾಸಿಟಿ ದಾಖಲಿಸಿದ್ದೀರಿ ಎಂದು ಪ್ರತಿಭಟನೆ ನಡೆಸಿದ್ದು, ನಾವೂ ಸಹ ಪ್ರತಿಭಟನೆ ನಡೆಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಈ ವೇಳೆ ದೂರು ತೆಗೆದುಕೊಳ್ಳಲು ದೇವದುರ್ಗ ಪೊಲೀಸರು ನಿರಾಕರಿಸಿದ್ದು, ನ್ಯಾಯ ಬೇಕು ಎಂದು ಶಾಸಕಿ ಪ್ರತಿಭಟನೆಗೆ ಕುಳಿತಿದ್ದಾರೆ.
ಅಕ್ರಮ ಮರಳು ಸಾಗಣೆ ಟ್ರಾಕ್ಟರ್ ಜಪ್ತಿ ಮಾಡಿದ್ದಕ್ಕೆ ರಾಯಚೂರಿನ ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಪುತ್ರ , ಆಪ್ತ ಸಹಾಯಕರು ಸೇರಿ ಹಲವರು ಹಲ್ಲೆ ಮಾಡಿದ್ದಾರೆ ಅಂತ ಆರೋಪಿಸಿ ದೇವದುರ್ಗ ಠಾಣೆ ಕಾನ್ಸ್‌ಟೇಬಲ್ ಹನುಮಂತರಾಯ ದೂರು ನೀಡಿದ್ದು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವದುರ್ಗ ಪೇದೆ ಹನುಮಂತ್ರಾಯ ನಾಯಕ್ ಮೇಲೆ ಹಲ್ಲೆ, ಜಾತಿನಿಂದನೆ ಮಾಡಿದ್ದಕ್ಕೆ ಶಾಸಕಿ ಪುತ್ರ ಸಂತೋಷ್, ಸಹೋದರ ತಿಮ್ಮಾರೆಡ್ಡಿ, ಆಪ್ತ ಕಾರ್ಯದರ್ಶಿ ಇಲಿಯಾಸ್, ರಫೀಕ್ ಸೇರಿ 8 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಪ್ರತಿಭಟನಾ ಸ್ಥಳಕ್ಕೆ ಎಸ್‌ಪಿ ನಿಖಿಲ್ ಬಿ ಭೇಟಿ ನೀಡಿ ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಶಾಸಕಿ ಪ್ರತಿಭಟನೆ ಹಿಂಪಡೆದಿದ್ದಾರೆ.