ಮೋದಿ, ಶಾ ಇಬ್ಬರೂ ದುಶ್ಯಾಸನ ಮತ್ತು ದುರ್ಯೋಧನರಿದ್ದಂತೆ; ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಮಹಾಭಾರತದ ಇಬ್ಬರು ಖಳನಾಯಕರಾದ ದುಶ್ಯಾಸನ ಮತ್ತು ದುರ್ಯೋಧನರಿದ್ದಂತೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪಾದಿಸಿದ್ದಾರೆ.

ನಿನ್ನೆ ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್‌ ಶಾ, ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಭಯೋತ್ಪಾದಕ ಜಾಲಗಳು ಕಾರ್ಯನಿರ್ವಹಿಸುತ್ತಿವೆ ಆಪಾದಿಸಿದ್ದರು. ಇವರ ಆರೋಪಕ್ಕೆ ತಿರುಗೇಟು ನೀಡಿರುವ ಮಮತಾ ದೀದಿ ಅವರು ಇಂದು ತಿರುಗೇಟು ನೀಡಿದ್ದಾರೆ.

ಬಂಗಾಳದ ಬಂಕುರಾದ ಬಿರ್ಸಿಂಗ್‌ ಪುರದಲ್ಲಿ ಪಕ್ಷದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಶಕುನಿಯ ಶಿಷ್ಯ ದುಶ್ಶಾಸನ ಮಾಹಿತಿಯನ್ನು ಸಂಗ್ರಹಿಸಲು ಬಂಗಾಳಕ್ಕೆ ಬಂದಿದ್ದಾನೆ. ಚುನಾವಣೆ ಸನಿಹವಾಗುತ್ತಿದ್ದಂತೆ ದುಶ್ಶಾಸನ ಮತ್ತು ದುರ್ಯೋಧನರಿಬ್ಬರೂ ಪ್ರತ್ಯಕ್ಷರಾಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರೇ ಇಲ್ಲ ಎಂದಾದಲ್ಲಿ ಪಹಲ್ಗಾಮ್‌ ನಲ್ಲಿ ದಾಳಿ ಹೇಗೆ ನಡೆಯಿತು? ನೀವೇ ಪಹಲ್ಗಾಮ್‌ ನಲ್ಲಿ ದಾಳಿ ನಡೆಸಿದ್ದೀರಾ? ದೆಹಲಿಯಲ್ಲಿ ನಡೆದ ಘಟನೆಯ ಹಿಂದೆ ಯಾರ ಕೈವಾಡವಿದೆ? ಎಂದು ಅಮಿತ್ ಶಾ ಅವರನ್ನು ಸಿಎಂ ಮಮತಾ ಬ್ಯಾನರ್ಜಿ ಕೆಣಕಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಮೋದಿ ಶಾ ಜೋಡಿ ಪದೇ ಪದೇ ಭೇಟಿ ನೀಡುತ್ತಿದ್ದಾರೆ.

More articles

Latest article

Most read