Saturday, May 18, 2024

ಬೆಂಗಳೂರಿಗೆ ಆಗಮಿಸಿದ ಮೋದಿ, ಅದ್ದೂರಿ ಸ್ವಾಗತ

Most read

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ನಾಡಪ್ರಭು ಕೆಂಪೇಗೌಡ ವಿಮಾನನಿಲ್ದಾಣದಲ್ಲಿ ಸರ್ಕಾರದ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವಾಗತಿಸಿದರು. ಈ ಸಂದರ್ಭದಲ್ಲಿಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಸ್ಥಿತರಿದ್ದರು.

ಪ್ರಧಾನಿ ಮೋದಿ ಇಂದು ಬೋಯಿಂಗ್ ಘಟಕ ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ವಿಮಾನ‌ ನಿಲ್ದಾಣ ಸುತ್ತಮುತ್ತ ಬಿಗಿ‌ಪೊಲೀಸ್ ಭದ್ರತೆ‌ ಕೈಗೊಳ್ಳಲಾಗಿತ್ತು. ಮೋದಿಯವರನ್ನು ನೋಡಲು ನೂರಾರು ಬಿಜೆಪಿ ಕಾರ್ಯಕರ್ತರು ವಿಮಾನ ನಿಲ್ದಾಣ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದರು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೋದಿ ಭಟ್ಟರ ಮಾರನಹಳ್ಳಿಗೆ ಪ್ರಯಾಣ ಬೆಳೆಸಿದರು. ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಯಲ್ಲಿ BIETC ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ ಬೋಯಿಂಗ್ ಸುಕನ್ಯಾ ಕಾರ್ಯಕ್ರಮ ಲೋಕಾರ್ಪಣೆ ಮಾಡಲಿದ್ದಾರೆ.

More articles

Latest article