ಮೋದಿ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದುಹೋಗಲಿದೆ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕೇಂದ್ರದಲ್ಲಿ ಮೂರನೇ ಅವಧಿಗೆ ಅಸ್ತಿತ್ವಕ್ಕೆ ಬಂದಿರುವ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದುಹೋಗಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮೋದಿ ಸರ್ಕಾರ ಅಲ್ಪಮತದ ಸರ್ಕಾರ. ಇದು ತಪ್ಪಾಗಿ ಅಧಿಕಾರಕ್ಕೆ ಬಂದಿದೆ. ಅವರ ಬಳಿ ಸರಿಯಾದ ಜನಾದೇಶವಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಉದ್ದೇಶ ದೇಶದಲ್ಲಿ ಅಸ್ಥಿರತೆ ಇರಬಾರದು, ಸರ್ಕಾರ ಸುಗಮವಾಗಿ ನಡೆದುಕೊಂಡುಹೋಗಬೇಕು ಎಂಬುದಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಯಾವುದು ಸರಿಯಾಗಿ ನಡೆಯುತ್ತಿರುತ್ತದೋ ಅದು ಸರಿಯಾಗಿ ನಡೆಯದಂತೆ ನೋಡಿಕೊಳ್ಳುತ್ತಾರೆ. ಹಾಗಿದ್ದರೂ ಕೂಡ ನಾವು ದೇಶವನ್ನು ಬಲಿಷ್ಠಗೊಳಿಸುವ ದೃಷ್ಟಿಯಿಂದ ಸಹಕಾರ ನೀಡುವುದಾಗಿ ಖರ್ಗೆ ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿರುವ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಲು ಖರ್ಗೆ ನಿರಾಕರಿಸಿದರು.

More articles

Latest article

Most read