ಭೂ ಕುಸಿತಕ್ಕೆ ಒಳಗಾಗಿರುವ ವಯನಾಡ್‌ಗೆ ಪ್ರಧಾನಿ ಮೋದಿ

ಭೂ ಕುಸಿತಕ್ಕೆ ಒಳಗಾಗಿರುವ ವಯನಾಡ್​​ನಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯ ಮತ್ತು ಪುನರ್ವಸತಿ ಕಾರ್ಯ ಪರಿಶೀಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳಕ್ಕೆ ಭೇಟಿ ನೀಡುತ್ತಿದ್ದಾರೆ. ಕಣ್ಣೂರಿಗೆ 11 ಗಂಟೆಗೆ ಬಂದಿಳಿದಿರುವ ಪ್ರಧಾನಿ, ಭೂ ಕುಸಿತ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಈ ವೇಳೆ ದುರಂತದಿಂದ ಸಂಭವಿಸಿರುವ ಪ್ರದೇಶಗಳಿಗೆ ಭೇಟಿ ನೀಡಲಿರುವ ಅವರು, ರಕ್ಷಣಾ ತಂಡದಿಂದ ನಡೆಯುತ್ತಿರುವ ಕಾರ್ಯಾಚರಣೆ ಕುರಿತು ಮಾಹಿತಿ ಪಡೆಯಲಿದ್ದಾರೆ. ಪುನರ್ವಸತಿ ಕಾರ್ಯಾಚರಣೆ ಪ್ರಯತ್ನಗಳ ಕುರಿತು ಅವಲೋಕನ ನಡೆಸಲಿದ್ದಾರೆ. ಇದೇ ವೇಳೆ ದುರಂತದ ಪರಿಣಾಮಕ್ಕೆ ಒಳಗಾಗಿರುವವರಿಗೆ ಸಾಂತ್ವನ ಹಾಗೂ ಧೈರ್ಯ ತುಂಬಲಿದ್ದಾರೆ.

ಭೂ ಕುಸಿತದಿಂದ ಪಾರಾಗಿ ನಿರಾಶ್ರಿತರ ಶಿಬಿರ ಮತ್ತು ಘಟನೆಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತರನ್ನು ಭೇಟಿಯಾಗಿ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಇದಾದ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಅವರು, ಘಟನೆ ಮತ್ತು ದುರಂತದಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಗಳ ಕುರಿತು ವಿವರಣೆ ಪಡೆಯಲಿದ್ದಾರೆ.

More articles

Latest article

Most read