ನವದೆಹಲಿ : ʼಮುಂದೊಂದು ದಿನ ಪ್ರಧಾನಿ ನರೇಂದ್ರ ಮೋದಿಯವರು ಬಹಳ ಜನಪ್ರಿಯ ಎಂದು ಹೇಳಿಕೊಳ್ಳಬಹುದು ಆದರೆ ಇದು ಭಾರತದ ಪ್ರಜಾಪ್ರಭುತ್ವಕ್ಕೆ ಮತ್ತು ಚುನಾವಣೆಗೆ ಅಗತ್ಯವಿಲ್ಲʼ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿಯ ವಿರುದ್ಧ ರಾಜ್ಯಸಭೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.
ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, ಸರ್ಕಾರವು ವಿರೋಧ ಪಕ್ಷದ ಸದಸ್ಯರ ವಿರುದ್ಧ ಪಕ್ಷಪಾತ ದೋರಣೆಯನ್ನು ತೋರಿಸುವ ಜೊತೆಗೆ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಅವರನ್ನು ದೇಶವಿರೋಧಿಗಳೆಂಬಂತೆ ಬಿಂಬಿಸಲಾಗುತ್ತಿದೆ ಮತ್ತು ಜನರು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಕಳೆದುಕೊಳ್ಳುತ್ತಾರೆ ಎಂದು ಆರೋಪಿಸದರು.
“ಪ್ರಧಾನಿಯವರು ಕೊನೆಯ ಚುನಾವಣೆಯನ್ನು ಯಾವಾಗ ಘೋಷಿಸುತ್ತಾರೆ ಎಂಬುದು ನನಗೆ ತಿಳಿದಿಲ್ಲ, ನಾನು ಬಹಳ ಜನಪ್ರಿಯ ಮತ್ತು ನನಗೆ ಪ್ರಜಾಪ್ರಭುತ್ವದ ಅಗತ್ಯವಿಲ್ಲ ಎಂದು ಹೇಳಿಕೊಳ್ಳುತ್ತಾರೆ” ಎಂದು ಖರ್ಗೆ ವ್ಯಂಗ್ಯವಾಡಿದರು.