ಇಂಗ್ಲೆಂಡ್, ಐರ್ಲೆಂಡ್ ಪ್ರವಾಸದಿಂದ ಮೊಹಮ್ಮದ್ ಸಿರಾಜ್ ಹೊರಕ್ಕೆ!

ಬೆಂಗಳೂರು : ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಿಗೆ ಮೊಹಮ್ಮದ್ ಸಿರಾಜ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು, ಆದರೆ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ಗೆ ಅವರನ್ನು ಆಯ್ಕೆ ಮಾಡಲಾಗಿರಲಿಲ್ಲ.

ಕಾರ್ಯಭಾರ ನಿರ್ವಹಣೆ  ಪ್ರಕ್ರಿಯೆಯ ಭಾಗವಾಗಿ ಮೊಹಮ್ಮದ್ ಸಿರಾಜ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ ಅವರ ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಅವರನ್ನು ಹೆಸರಿಸಲಾಗಿದೆ ಎಂದು ಬಿಸಿಸಿಐ (BCCI) ಮಂಗಳವಾರ ತಿಳಿಸಿದೆ. ಮುಂದಿನ ದೀರ್ಘ ಅಂತರರಾಷ್ಟ್ರೀಯ ಸೀಸನ್‌ಗೂ ಮುನ್ನ ಸಿರಾಜ್ ಅವರು ಬೇಗನೆ ಚೇತರಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಈ ಕ್ರಮವನ್ನು “ಮುನ್ನೆಚ್ಚರಿಕೆ ಕ್ರಮ” ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಣ್ಣಿಸಿದೆ.

“ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಿಗೆ ಭಾರತ ತಂಡದಿಂದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಹಿಂಪಡೆಯಲಾಗಿದೆ,” ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

“ಬಿಸಿಸಿಐ ವೈದ್ಯಕೀಯ ತಂಡ ಮತ್ತು ತಂಡದ ಮ್ಯಾನೇಜ್‌ಮೆಂಟ್ ನಡುವಿನ ಚರ್ಚೆಯ ನಂತರ, ಸಿರಾಜ್ ಅವರ ಕಾರ್ಯಭಾರ ನಿರ್ವಹಣೆ ಕಾರ್ಯಕ್ರಮದ ಭಾಗವಾಗಿ ಅವರಿಗೆ ವಿಶ್ರಾಂತಿ ಪಡೆಯಲು ಸಲಹೆ ನೀಡಲಾಗಿದೆ.” ಎಂದು ಬಿಸಿಸಿಐ ಹೇಳಿದೆ.

“ಮುಂದಿನ ಸುದೀರ್ಘ ಅಂತರರಾಷ್ಟ್ರೀಯ ಸೀಸನ್‌ಗೂ ಮುನ್ನ ಸೂಕ್ತ ಚೇತರಿಕೆಯನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರವನ್ನು ಮುನ್ನೆಚ್ಚರಿಕೆ ಕ್ರಮವಾಗಿ ತೆಗೆದುಕೊಳ್ಳಲಾಗಿದೆ. ಪುರುಷರ ಆಯ್ಕೆ ಸಮಿತಿಯು ಎರಡೂ ಟಿ20 ಸರಣಿಗಳಿಗೆ ಸಿರಾಜ್ ಅವರ ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಅವರನ್ನು ಹೆಸರಿಸಿದೆ,” ಎಂದು ಬಿಸಿಸಿಐ ತಿಳಿಸಿದೆ.

ಭಾರತದ ಕಳೆದ ಟಿ20 ಅಭಿಯಾನವಾದ ಟಿ20 ವಿಶ್ವಕಪ್‌ಗೆ ಸಿರಾಜ್ ಅವರನ್ನು ಕೊನೆಯ ಕ್ಷಣದಲ್ಲಿ ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಮತ್ತೊಂದೆಡೆ, ಐಪಿಎಲ್ 2026 ರಲ್ಲಿ ಗುಜರಾತ್ ಟೈಟಾನ್ಸ್ ಪರ ಎಲ್ಲಾ 17 ಪಂದ್ಯಗಳನ್ನು ಆಡಿದ್ದ ಅವರು 19 ವಿಕೆಟ್‌ಗಳನ್ನು ಕಸಿದಿದ್ದರು. ಈ ಬಲಗೈ ವೇಗಿ ಸೋಮವಾರವಷ್ಟೇ ಮೂರೇ ದಿನಗಳಲ್ಲಿ ಮುಕ್ತಾಯಗೊಂಡ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ಭಾಗವೂ ಆಗಿದ್ದರು.

ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕಾಗಿ ನವೀಕರಿಸಲಾದ ಭಾರತ ತಂಡ:

ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಿವಂ ದುಬೆ, ತಿಲಕ್ ವರ್ಮಾ (ಉಪನಾಯಕ), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ.

More articles

Latest article

Most read