ತೆಲಂಗಾಣ ಸರ್ಕಾರ: ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಹೈದರಾಬಾದ್: ಖ್ಯಾತ ಕ್ರಿಕೆಟ್‌ ಆಟಗಾರ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಕಾಂಗ್ರೆಸ್ ಮುಖಂಡರೂ ಆಗಿರುವ ಮೊಹಮ್ಮದ್ ಅಜರುದ್ದೀನ್ ಅವರು ಇಂದು ತೆಲಂಗಾಣ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ಅಜರುದ್ದೀನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಈ ಮೂಲಕ ಅಜರುದ್ದೀನ್ ಅವರು ಮುಖ್ಯಮಂತ್ರಿ ರೇವಂತ ರೆಡ್ಡಿ ಸರ್ಕಾರದಲ್ಲಿ ಸಚಿವರಾದ ಅಲ್ಪಸಂಖ್ಯಾತ ಸಮುದಾಯದ ಮೊದಲ ಸಚಿವ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರಿಗೆ ಕ್ರೀಡ ಇಲ್ಲವೇ ಅಲ್ಪಸಂಖ್ಯಾತ ಕಲ್ಯಾಣ ಖಾತೆ ನೀಡಲಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ಕಾರಣಕ್ಕಾಗಿ ಅಜರುದ್ದೀನ್ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ರಾಜಕೀಯ ವಲಯಗಳಲ್ಲಿ ಚರ್ಚೆಯಾಗುತ್ತಿದೆ. ಕೆಲವೇ ದಿನಗಳಲ್ಲಿ  ಜುಬಿಲಿ ಹಿಲ್ಸ್‌ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಈ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮುಸ್ಲಿಂ ಮತದಾರರಿದ್ದಾರೆ.

ಈ ಕ್ಷೇತ್ರದ ಬಿಆರ್‌ಎಸ್ ಶಾಸಕ ಮಾಗಂಟಿ ಗೋಪಿನಾಥ್ ಅವರು ಜೂನ್‌ ನಲ್ಲಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದರು.

More articles

Latest article

Most read