ಜೂ.5ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ

ಬೆಂಗಳೂರು : ಕೇರಳ ಮತ್ತು ತಮಿಳುನಾಡಿಗೆ ಜೂ.4ರಂದು ಮುಂಗಾರು ಪ್ರವೇಶಿಸಲಿದ್ದು, ಕರ್ನಾಟಕ್ಕೆ ಜೂ.5 ಅಥವಾ 6ರಂದು ಮುಂಗಾರು ಮಾರುತಗಳ ಆಗಮನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಾರಿ ಮುಂಗಾರು ಪ್ರವೇಶ ತಡ ಆಗಲಿದೆ ಎನ್ನಲಾಗಿತ್ತು. ಆದರೆ ತಡ ಆಗಿಲ್ಲ ಸರಿಯಾದ ಸಮಯಕ್ಕೆ ಮುಂಗಾರು ಪ್ರವೇಶಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜೂನ್ 4 ರ ಸುಮಾರಿಗೆ ನೈಋತ್ಯ ಮತ್ತು ಆಗ್ನೇಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಲಕ್ಷದ್ವೀಪ ದ್ವೀಪಗಳು, ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳು, ನೈಋತ್ಯ, ಪಶ್ಚಿಮ ಮಧ್ಯ, ಪೂರ್ವ ಮಧ್ಯ ಮತ್ತು ಈಶಾನ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ಉಳಿದ ಭಾಗಗಳಿಗೆ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎನ್ನಲಾಗಿದೆ.

ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ವಿಜಯ ನಗರ, ಬಳ್ಳಾರಿ, ಚಿಕ್ಕಬಳ್ಳಾಪುರ,  ಬೀದರ್ ,ಗದಗ, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳದಲ್ಲಿಯೂ ಮುಂದಿನ 4 ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ಹೇಳಿದೆ.

More articles

Latest article

Most read