Friday, December 6, 2024

ಹಾನಗಲ್ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಟ್ವಿಸ್ಟ್ : 7 ಯುವಕರಿಂದ ಗ್ಯಾಂಗ್ ರೇಪ್!?

Most read

ಹಾವೇರಿಯಲ್ಲಿ ನೈತಕ ಪೊಲೀಸ್ ಗಿರಿ ಪ್ರಕರಣಕ್ಕೆ ಈಗ ರೋಚಕ ಟ್ವಿಸ್ಟ್ ಸಿಕ್ಕಿದೆ. ಹೌದು, ೫ ಜನರ ಯುವಕರ ಗುಂಪು ಏಕಾಏಕಿ ಲಾಡ್ಜ್ ಗೆ ನುಗ್ಗಿ ಹಲ್ಲೆ ಮಾಡಿದ್ದಲ್ಲದೇ ಕಾರಿನಲ್ಲಿ ಕರೆದೊಯ್ದು 7 ಮುಸ್ಲಿಂ ಯುವಕರು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಹೋಟೆಲ್​ನಲ್ಲಿ ಹಲ್ಲೆ ಮಾಡಿದ ಬಳಿಕ ಅರಣ್ಯ ಪ್ರದೇಶಕ್ಕೆ ಕಾರಿನಲ್ಲಿ ಕರೆದೊಯ್ದು 7 ಮುಸ್ಲಿಂ ಯುವಕರು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಹಿಂದೂ ಪುರುಷನ ಜೊತೆ ಲಾಡ್ಜ್​ನಲ್ಲಿ ಕಾಣಿಸಿಕೊಂಡಿದ್ದಕ್ಕೆ ಮಹಿಳೆ ಮೇಲೆ ಗ್ಯಾಂಗ್ ರೇಪ್? ಮಾಡಲಾಗಿದೆ ಎನ್ನಲಾಗುತ್ತಿದೆ. ಒಬ್ಬರಾದ ಮೇಲೆ ಒಬ್ಬರು ನನ್ನ ರೇಪ್ ಮಾಡಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ.

ಮತ್ತೊಂದೆಡೆ ತನ್ನ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಮಹಿಳೆಯ ಪತಿ ಕೂಡ ಹೇಳಿಕೆ ನೀಡಿದ್ದಾರೆ. ಕಾಡಿನಲ್ಲಿ ರೇಪ್ ಮಾಡಿದ್ದ ವಿಡಿಯೋ ಇದೆ ಎಂದು ಮಹಿಳೆಯ ಪತಿ ಆರೋಪಿಸಿದ್ದಾರೆ.

ನೈತಿಕ ಪೊಲೀಸ್​ಗಿರಿ ಯಾರೇ ನಡೆಸಿದ್ರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತೆ. ಇಂತಹ ಘಟನೆ ಎಲ್ಲೇ ನಡೆದ್ರೂ ತಕ್ಷಣ ಕ್ರಮ ಕೈಗೊಳ್ಳುತ್ತಿದ್ದೇವೆ. ಸಮಾಜದಲ್ಲಿ ಎಲ್ಲರಿಗೂ ಕಾನೂನು ಒಂದೇ ಎಂದು ಬೆಂಗಳೂರಿನಲ್ಲಿ ಡಿಜಿ & ಐಜಿಪಿ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ.

More articles

Latest article