ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ: ಸಚಿವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಕರ್ನಾಟಕದಲ್ಲಿ ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರು, ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. 

ಲೋಕಸಭೆ ಚುನಾವಣೆ ಫಲಿತಾಂಶದ ನಂತರ, ಸಚಿವ ರಾಜಣ್ಣ ಹೆಚ್ಚುರಿ ಡಿಸಿಎಂ ಹುದ್ದೆ ಬಗ್ಗೆ ದ್ವನಿ ಎತ್ತಿದ್ದರು. ನಂತರ ಸಚಿವ ಸತೀಶ್‌ ಜಾರಕಿಹೊಳಿ, ಜಮೀರ್‌ ಅಹಮದ್‌ ಮತ್ತು ಇನ್ನಿತರೆ ಸಚಿವರು, ಕಾಂಗ್ರೆಸ್ ಶಾಸಕರು,  ಹೇಳಿಕೆ, ನೀಡಿದ್ದರ ಪರಿಣಾಮ ಗೊಂದಲಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಕೆಲ ನಾಯಕರು ಹೈಕಮಾಂಡ್ ಭೇಟಿಗಾಗಿ ದೆಹಲಿಗೂ ತೆರಳಿದ್ದರು. ಆದರೀಗ ಸಿಎಂ ಸಿದ್ದರಾಮಯ್ಯ ಎಲ್ಲರಿಗೂ ಖಡಕ್ ಎಚ್ಚರಿಕೆ ನೀಡಿದ್ದಾರೆ. 

ಹೆಚ್ಚುವರಿ ಡಿಸಿಎಂ ಬಗ್ಗೆ ಡಿಕೆ ಶಿವಕುಮಾರ್‌ ಮಾತನಾಡಿ, ಹೈಕಮಾಂಡ್ ಇದೆ, ಅವರು ಏನು ತೀರ್ಮಾನ ಮಾಡುತ್ತಾರೋ ಮಾಡಲಿ. ಯಾರು ಏನು ಬೇಕಾದರೂ ಹೇಳಲಿ, ಬಹಿರಂಗವಾಗಿ ಚರ್ಚಿಸಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಿದರೆ ಬಹಳ ಸಂತೋಷ. ಅದು ಕೂಡ ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.

More articles

Latest article

Most read